ಬೆಲೆ ಏರಿಕೆ ಖಂಡಿಸಿ ನಾಳೆ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರು, 10 ನವೆಂಬರ್ (ಹಿ.ಸ.): ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಸಾ
ವಿಜಯೇಂದ್ರ ಎಕ್ಸ್ ಪೋಸ್ಟ್


ಬೆಂಗಳೂರು, 10 ನವೆಂಬರ್ (ಹಿ.ಸ.):

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಣೆ ನೀಡಿರುವ ಅವರು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬದಲು ಬೆಲೆ ಏರಿಕೆಯ ಮೂಲಕ ಜನರನ್ನು ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮಿತಿಮೀರಿದ್ದು, ಸಾರ್ವಜನಿಕರ ಸಹನೆಯ ಕಟ್ಟೆ ಒಡೆದಿದೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ಮತ್ತು ರೈತವಿರೋಧಿ ಆಡಳಿತದ ವಿರುದ್ಧ ಧ್ವನಿ ಎತ್ತಲು ಪಕ್ಷದ ಬೃಹತ್ ಜನಾಕ್ರೋಶ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ, ಸರ್ಕಾರಕ್ಕೆ ಜನರ ಆಕ್ರೋಶವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಜಯೇಂದ್ರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande