
ಮಂಡ್ಯ, 10 ನವೆಂಬರ್ (ಹಿ.ಸ.):
ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮದ್ದೂರು ತಾಲ್ಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದ ನರಸಿಂಹಯ್ಯ (59) ಎಂದು ಗುರುತಿಸಲಾಗಿದೆ. ಇವರು ಕೆಸ್ತೂರು ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ನರಸಿಂಹಯ್ಯ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಜಮಾಯಿಸಿದ್ದು, ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಕುರಿತು ಅಗತ್ಯ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R