
ಬಳ್ಳಾರಿ, 12 ನವೆಂಬರ್ (ಹಿ.ಸ.)
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವವನ್ನು ಏರ್ಪಡಿಸಲಿದೆ.
ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ಪ್ರತಿಭೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
*ವಿಭಾಗಗಳು ಮತ್ತು ಕಲಾ ಪ್ರಕಾರಗಳು:*
ಬಾಲ ಪ್ರತಿಭೆ (8 ರಿಂದ 14 ವರ್ಷದ ಒಳಗಿನವರು) ಹಾಗೂ ಕಿಶೋರ ಪ್ರತಿಭೆ (14 ರಿಂದ 18 ವರ್ಷದ ಒಳಗಿನವರು): ಏಕ ವ್ಯಕ್ತಿ ಸ್ಪರ್ಧೆಗಾಗಿ ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಹಿಂದುಸ್ತಾನಿ ವಾದ್ಯ ಸಂಗೀತ ಹಾಗೂ ಶಾಸ್ತ್ರೀಯ ಸಂಗೀತ ಗಾಯನ ಕಲಾ ಪ್ರಕಾರಗಳು.
ಯುವ ಪ್ರತಿಭೆ (18 ರಿಂದ 30 ವರ್ಷಕ್ಕಿಂತ ಕಡಿಮೆಯಿರುವವರು): ಏಕ ವ್ಯಕ್ತಿ ಸ್ಪರ್ಧೆಯಲ್ಲಿ ಆಶುಭಾಷಣ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದುಸ್ತಾನಿ ವಾದ್ಯ ಸಂಗೀತ ಕಲಾ ಪ್ರಕಾರಗಳು ಇರುತ್ತವೆ.
ಸಮೂಹ ಸ್ಪರ್ಧೆ: ನಾಟಕ ಹಾಗೂ ಜನಪದ ನೃತ್ಯ ಕಲಾ ಪ್ರಕಾರಗಳಿದ್ದು, ಪ್ರತಿ ತಂಡದಲ್ಲಿ ಕನಿಷ್ಠ 10 ರಿಂದ ಗರಿಷ್ಠ 15 ಸದಸ್ಯರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ.
*ನಿಯಮಗಳು:*
ಸ್ಪರ್ಧೆಯಲ್ಲಿ ಭಾಗವಹಿಸುವವರು ವಯಸ್ಸಿನ ದೃಢೀಕರಣಕ್ಕಾಗಿ ವಿದ್ಯಾಸಂಸ್ಥೆಯಿಂದ ಪಡೆದ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಒಬ್ಬ ಸ್ಪರ್ಧಿಗೆ ಕೇವಲ ಒಂದು ಕಲಾ ಪ್ರಕಾರದಲ್ಲಿ ಮಾತ್ರ ಸ್ಪರ್ಧಿಸಲು ಅವಕಾಶವಿರುತ್ತದೆ.
ಖಾಸಗಿ ಸ್ಪರ್ಧಾರ್ಥಿಗಳಾಗಿದ್ದಲ್ಲಿ ಶಾಲೆ-ಕಾಲೇಜಿನ ಜನ್ಮ ದಿನಾಂಕ ದೃಢೀಕರಣ ಪತ್ರ ಅಥವಾ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳಿಂದ ನೀಡುವ ಜನನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಆಸಕ್ತರು ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 20 ರ ಸಂಜೆ 5 ಗಂಟೆಯೊಳಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
*ಅರ್ಜಿ ಕಳುಹಿಸಬೇಕಾದ ವಿಳಾಸ:*
ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾಂಸ್ಕøತಿಕ ಸಮುಚ್ಚಯ, ಡಾ. ರಾಜ್ ಕುಮಾರ್ ರಸ್ತೆ, ಬಳ್ಳಾರಿ – 583101. (ದೂರವಾಣಿ ಸಂಖ್ಯೆ: 08392-275182).
ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್