
ಬಳ್ಳಾರಿ, 12 ನವೆಂಬರ್ (ಹಿ.ಸ.)
ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ನವೆಂಬರ್ 15 ಮತ್ತು 16 ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್ 15 ರಂದು ಸಂಜೆ 06.45 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ 07.30 ಗಂಟೆಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ವಿಶ್ವವಿದ್ಯಾಲಯದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ರಾತ್ರಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 16 ರಂದು ಬೆಳಿಗ್ಗೆ 10.10 ಗಂಟೆಗೆ ಬಳ್ಳಾರಿ ನಗರದ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.
ನಂತರ ಬೆಳಿಗ್ಗೆ 11 ಗಂಟೆಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ವಿಶ್ವವಿದ್ಯಾಲಯದಲ್ಲಿ ಡಿಜಿಟಲ್ ಮತ್ತು ಎಲ್.ಎಂ.ಎಸ್ ತರಗತಿ ಕೊಠಡಿಗಳನ್ನು ಉದ್ಘಾಟಿಸಿ, ಸೋಲಾರ್ ಗ್ರಿಡ್ ಅಳವಡಿಕೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬಳಿಕ ಬೆಳಿಗ್ಗೆ 11.30 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗ ಮಂದಿರದಲ್ಲಿ ಜರುಗಲಿರುವ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 01.30 ಗಂಟೆಗೆ ಘಟಿಕೋತ್ಸವದ ಬಳಿಕ ಬಳ್ಳಾರಿಯಿಂದ ತುಮಕೂರಿಗೆ ಪ್ರಯಾಣ ಬೆಳೆಸುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್