ಬಳ್ಳಾರಿ : ನವೆಂಬರ್ 16 ರಂದು ನೇರ ಸಂದರ್ಶನ
ಬಳ್ಳಾರಿ, 13 ನವೆಂಬರ್ (ಹಿ.ಸ.) ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಜಾಯಲುಕ್ಕಾಸ್ ಜ್ಯುವೆಲ್ಲರ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಸಿಆರ್ಎಂ, ಡ್ರೈವರ್ ಹಾಗೂ ಆಫೀಸ್
ಬಳ್ಳಾರಿ : ನವೆಂಬರ್ 16 ರಂದು ನೇರ ಸಂದರ್ಶನ


ಬಳ್ಳಾರಿ, 13 ನವೆಂಬರ್ (ಹಿ.ಸ.)

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಜಾಯಲುಕ್ಕಾಸ್ ಜ್ಯುವೆಲ್ಲರ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಸೇಲ್ಸ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಸಿಆರ್ಎಂ, ಡ್ರೈವರ್ ಹಾಗೂ ಆಫೀಸ್ ಬಾಯ್ ಸೇರಿದಂತೆ ಒಟ್ಟು 40ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಇಬ್ಬರಿಗೂ ಈ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ನವೆಂಬರ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಹಳೆ ತಾಲೂಕು ಆಫೀಸ್ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 7619207762, 6360408094, 7676427793 ಗೆ ಸಂಪರ್ಕಿಸಬಹುದಾಗಿದೆ.

ಸಂದರ್ಶನದಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರ ಜೊತೆಗೆ ನೇರವಾಗಿ ಮೇಲ್ಕಂಡ ಸ್ಥಳದಲ್ಲಿ ಹಾಜರಾಗಿ ಈ ಅವಕಾಶದ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande