ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ
ತೋರಣಗಲ್ಲು, 13 ನವೆಂಬರ್ (ಹಿ.ಸ.) ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ತುಂಬುವ ಮುನ್ನ ಮಾಡುವ ಮದುವೆ ಬಾಲ್ಯವಿವಾಹವಾಗಿದ್ದು, ಇದು ಶಿಕ್ಷಾರ್ಹ ಅಪರಾಧ ಹಾಗೂ ಮಕ್ಕಳ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ತಿಳಿಸಿದರು. ಜಿಲ್
Child marriage violates children's rights


Child marriage violates children's rights


Child marriage violates children's rights


Child marriage violates children's rights


ತೋರಣಗಲ್ಲು, 13 ನವೆಂಬರ್ (ಹಿ.ಸ.)

ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ತುಂಬುವ ಮುನ್ನ ಮಾಡುವ ಮದುವೆ ಬಾಲ್ಯವಿವಾಹವಾಗಿದ್ದು, ಇದು ಶಿಕ್ಷಾರ್ಹ ಅಪರಾಧ ಹಾಗೂ ಮಕ್ಕಳ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತೋರಣಗಲ್ಲು ಮತ್ತು ಮಾದರಿ ಸರ್ಕಾರಿ ಪ್ರೌಢಶಾಲೆ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ಶಾಲೆಯ ಸಭಾ ಭವನದಲ್ಲಿ ‘ಬಾಲ್ಯವಿವಾಹ ನಿಷೇಧ ಹಾಗೂ ಹದಿಹರೆಯದವರ ಆರೋಗ್ಯ ರಕ್ಷಣೆ’ ಕುರಿತು ಶುಕ್ರವಾರ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಯ ಅವರು ಮಾತನಾಡಿದರು.

ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, ಇದನ್ನು ಹೋಗಲಾಡಿಸಲು ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು. ಬಾಲ್ಯವಿವಾಹದಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿವೆ. ಕಡಿಮೆ ವಯಸ್ಸಿನ ಗರ್ಭಧಾರಣೆ, ರಕ್ತಹೀನತೆ (ಅನೀಮಿಯಾ), ತಾಯಿ ಮತ್ತು ಶಿಶು ಮರಣದ ಅಪಾಯ, ಕಡಿಮೆ ತೂಕದ ಮಗು, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ, ಪೌಷ್ಟಿಕಾಂಶದ ಕೊರತೆ, ಶಿಕ್ಷಣ ಮತ್ತು ಭವಿಷ್ಯದ ಮೇಲಿನ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಭಾರತದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಜಾರಿಯಲ್ಲಿದ್ದು, ಬಾಲ್ಯವಿವಾಹ ಮಾಡಿಸುವುದು, ಭಾಗವಹಿಸುವುದು ಮತ್ತು ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತಪ್ಪಿತಸ್ಥರಿಗೆ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.

ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬ0ದರೆ ತಕ್ಷಣ ಉಚಿತ ಮಕ್ಕಳ ಸಹಾಯವಾಣಿ 1098 ಅಥವಾ 112 ಗೆ ಕರೆ ಮಾಡಿ ದೂರು ನೀಡಬಹುದು. ಅಲ್ಲದೆ, ಪೋಕ್ಸೋ ಕಾಯ್ದೆ 2012ರ ಪ್ರಕಾರ 18 ವರ್ಷದೊಳಗಿನ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ಕಾನೂನಿನ ಪ್ರಕಾರ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಬಳ್ಳಾರಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಆಪ್ತಸಮಾಲೋಚಕ ಚಂದ್ರಶೇಖರ್ ಆರ್.ಕೆ.ಎಸ್ ಅವರು ಮಾತನಾಡಿ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಕಂಡುಬರುವ ರಕ್ತಹೀನತೆಯನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ, ಉಚಿತವಾಗಿ ನೀಡುವ ಕಬ್ಬಿಣಾಂಶದ ಮಾತ್ರೆಗಳನ್ನು ವಾರಕ್ಕೊಂದರ0ತೆ ಸೇವಿಸಲು ತಿಳಿಸಿದರು.

ಸರಿಯಾದ ವೈಯಕ್ತಿಕ ಶುಚಿತ್ವವು ಆರೋಗ್ಯ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜೀವನಕ್ಕೆ ಸಹಾಯಕವಾಗಲಿದೆ ಎಂದ ಅವರು, ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಟೆಲಿಮಾನಸ್ 14416 ಉಚಿತ ಕರೆ ಮಾಡಿ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಹದಿಹರೆಯದಲ್ಲಿ ದೇಹದಲ್ಲಾಗುವ ಸಹಜ ಬದಲಾವಣೆಗಳ ಕುರಿತು ವಿವರಿಸಿದ ಅವರು, ಕ್ಷಯರೋಗ ನಿರ್ಮೂಲನೆ, ಕುಷ್ಟರೋಗ ನಿರ್ಮೂಲನೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಭಿತ್ತಿಪತ್ರದ ಮೂಲಕ ಮಾಹಿತಿ ನೀಡಿದರು.

ಸಹಶಿಕ್ಷಕರಾದ ಕೆ. ಎರಿಸ್ವಾಮಿ ಅವರು ಬಾಲ್ಯವಿವಾಹ ನಿಷೇಧ ಕುರಿತು ಜಾನಪದ ಗೀತೆ ಹಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಗುರುಗಳಾದ ಶಾಂತಲಾ, ಸಹಶಿಕ್ಷಕರಾದ ಸ್ನೇಹಲತ, ಜಬಿವುಲ್ಲಾ, ಅತಿಥಿ ಶಿಕ್ಷಕರಾದ ಅಶ್ವಿನಿ, ವಾಣಿಶ್ರೀ, ನಂದಿನಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande