ಕಲಬುರಗಿಯಲ್ಲಿ ₹58 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೇಂದ್ರ ಬಸ್ ನಿಲ್ದಾಣ ನಿರ್ಮಾಣ
ಶೀಘ್ರದಲ್ಲೇ 400 ಹೊಸ ಬಸ್ಗಳ ಸೇರ್ಪಡೆ; ನಾಲ್ಕು ಕಡೆ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಯೋಜನೆ
Kalaburagi-New-Central-Bus-Stand-58-Crore-Project-400-New-Buses


ಕಲಬುರಗಿ, 13 ನವೆಂಬರ್ (ಹಿ.ಸ.):

ನಗರದ ಹಳೆಯ ಕೇಂದ್ರ ಬಸ್ ನಿಲ್ದಾಣವನ್ನು ನೆಲಸಮಗೊಳಿಸಿ, ಸುಮಾರು 58 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ನೂತನ ಕೇಂದ್ರ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್ಟಿಸಿ) ಅಧ್ಯಕ್ಷ ಅರುಣ್ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ.

ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ, ಕೆಕೆಆರ್ಟಿಸಿ ವ್ಯಾಪ್ತಿಯಲ್ಲಿ ಶೀಘ್ರದಲ್ಲೇ 400 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಕಲಬುರಗಿ ನಗರದ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಯೋಜನೆಯೂ ಇದೆ. ಇದರಿಂದ ನಗರದ ವಿವಿಧ ಭಾಗಗಳ ಪ್ರಯಾಣಿಕರಿಗೆ ಸಾರಿಗೆ ಸಂಪರ್ಕ ಸುಲಭವಾಗಲಿದೆ ಎಂದು ತಿಳಿಸಿದರು.

ಕಲಬುರಗಿ ನಗರ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿಯೂ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಒದಗಿಸಲು ನಿಗಮ ಬದ್ಧವಾಗಿದೆ ಎಂದು ಕೆಕೆಆರ್ಟಿಸಿ ಅಧ್ಯಕ್ಷ ಅರುಣ್ಕುಮಾರ್ ಪಾಟೀಲ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande