
ಗದಗ, 13 ನವೆಂಬರ್ (ಹಿ.ಸ.)
ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಹುಬ್ಬಳ್ಳಿ ರಸ್ತೆಯ ಉತ್ಸವ ಭವನದ ಸಮೀಪವಿರುವ ಮರ್ನಾಕುಲಂ ಕಿಯಾ ಕಂಪನಿಯಲ್ಲಿ ನವೆಂಬರ್ 18ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಈ ಸಂದರ್ಶನದಲ್ಲಿ ಮರ್ನಾಕುಲಂ ಕಿಯಾ ಕಂಪನಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18ರಿಂದ 45 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು.
ಸರ್ವಿಸ್ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್, ಟೆಕ್ನಿಷಿಯನ್, ಸರ್ವಿಸ್ ಕನ್ಸಲ್ಟೆಂಟ್, ಪಾರ್ಟ್ಸ್ ಮ್ಯಾನೇಜರ್, ಟ್ಯಾಲಿ ಕ್ಲರ್ಕ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಮ್ಯಾನೇಜರ್, ಡೆಂಟರ್, ಪೇಂಟರ್ ಹಾಗೂ ರಿಸೆಪ್ಷನಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಎರಡು ರೆಸ್ಯೂಮ್ಗಳು (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಈ ನೇರ ಸಂದರ್ಶನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 8310111569, 8088562596 ಹಾಗೂ 6363330688 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP