ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು, 13 ನವೆಂಬರ್ (ಹಿ.ಸ.): ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೊದ ಪಿಂಕ್ ಮಾರ್ಗದ ರೈಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿ
ಮೆಟ್ರೋ ರೈಲಿನಲ್ಲಿ ಪ್ರಧಾನಿ,ರಾಜ್ಯಪಾಲರು, ಮುಖ್ಯಮಂತ್ರಿ ಪ್ರಯಾಣ


ಬೆಂಗಳೂರು, 13 ನವೆಂಬರ್ (ಹಿ.ಸ.):

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೊದ ಪಿಂಕ್ ಮಾರ್ಗದ ರೈಲಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿರುವ ಪಿಂಕ್ ಮಾರ್ಗದ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮಾರ್ಗದ ವಿವರ ಹಾಗೂ ಸಂಪರ್ಕ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು.

ಇದೇ ವೇಳೆ ಬೆಂಗಳೂರಿನಲ್ಲಿ ದ್ವಿಮಹಡಿ ಮಾದರಿಯ ಮೆಟ್ರೊ ವ್ಯವಸ್ಥೆಯ ಅನುಷ್ಠಾನದಿಂದ ಆಗುವ ಅನುಕೂಲಗಳು ಮತ್ತು ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಮುಖ್ಯಮಂತ್ರಿ ಪ್ರಧಾನಮಂತ್ರಿಯವರಿಗೆ ವಿವರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande