
ಬಳ್ಳಾರಿ, 13 ನವೆಂಬರ್ (ಹಿ.ಸ.)
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಬಳ್ಳಾರಿ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು 2026-27ನೇ ಸಾಲಿಗೆ ಪರಿಷ್ಕರಿಸಲು ಉದ್ದೇಶಿಸಲಾಗಿದೆ.
ಈ ಸಂಬoಧ ಮಾರುಕಟ್ಟೆ ಮೌಲ್ಯದ ಮಾರ್ಗದೂಚಿ ದರಗಳನ್ನು ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರಗಳ ಕರಡು ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಬಳ್ಳಾರಿ ಹಿರಿಯ ಉಪನೋಂದಣಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಉದ್ದೇಶಿತ ದರಗಳ ಕುರಿತು ಸಾರ್ವಜನಿಕರು ತಮ್ಮ ಯಾವುದೇ ರೀತಿಯ ಆಕ್ಷೇಪಣೆಗಳು ಅಥವಾ ಸಲಹೆ-ಸೂಚನೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ತಮ್ಮ ಆಕ್ಷೇಪಣೆಗಳು ಅಥವಾ ಸಲಹೆ-ಸೂಚನೆಗಳೇನಾದರೂ ಇದ್ದಲ್ಲಿ ಈ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಉಪನೋಂದಣಾಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಬಳ್ಳಾರಿ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ತಮ್ಮ ಮನವಿಯನ್ನು ಸಲ್ಲಿಸಬಹುದಾಗಿದೆ ಎಂದು ಹಿರಿಯ ಉಪ ನೋಂದಣಾಧಿಕಾರಿ ಪ್ರವೀಣ್ ಮ್ಯಾಗೇರಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್