
ಗದಗ, 13 ನವೆಂಬರ್ (ಹಿ.ಸ.):
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ವರ್ಷಕ್ಕೆ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೊಸ ಹೇಳಿಕೆ ನೀಡಿದ್ದಾರೆ.
ಗದಗದಲ್ಲಿ ರೈತರೊಂದಿಗೆ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಸಹಿ ಸಂಗ್ರಹವಾಗಲಿದೆ ಎಂದು ಹೇಳಿದ್ದಾರೆ.
ನಮಗಿರುವ ಮಾಹಿತಿಯ ಪ್ರಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಹಿ ಸಂಗ್ರಹಣೆ ನಡೆಯಲಿದೆ. ಹೊಸ ವರ್ಷಕ್ಕೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ದೆಹಲಿಗೆ ತೆರಳಿ ವಾಪಸಾದ ಬಳಿಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ರಾಹುಲ್ ಗಾಂಧಿ ಕೂಡ ಕೋಪಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟು ತಪ್ಪು ಮಾಡಿದೆ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಶಾಸಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಈ ವಿಚಾರ ತಿಳಿದಿರುವ ಕಾರಣ ಶಾಸಕರಿಗೆ ಅನುದಾನ ನೀಡುವ ಪ್ರಯತ್ನ ನಡೆಯುತ್ತಿದೆ ಎಂದು ಶ್ರೀರಾಮುಲು ಆರೋಪಿಸಿದ್ದಾರೆ.
ಸಹಿ ಸಂಗ್ರಹದ ವಿಚಾರ ಬಹಿರಂಗವಾಗುತ್ತಿದ್ದಂತೆ ಹೊಸ ನಾಟಕ ಆರಂಭವಾಗಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜನರೇ ಉತ್ತರ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ ಬಳಿಕ ರೈತರಿಗೆ 2,500 ರೂ. ಪರಿಹಾರ ನೀಡುವುದಾಗಿ ಹೇಳಿ ಕೇವಲ 1,500 ರೂ. ನೀಡಲಾಗಿದೆ.
ಉಳಿದ ಒಂದು ಸಾವಿರ ರೂಪಾಯಿ ಕೇಳಿದರೆ ಮುಂದೆ ನೀಡುವುದಾಗಿ ಹೇಳುತ್ತಿದ್ದಾರೆ. ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಇಂತಹ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹಾಲಿನ ದರ ಹೆಚ್ಚಳದ ಸಂದರ್ಭದಲ್ಲಿ ಸಬ್ಸಿಡಿ ನೀಡುವ ವ್ಯವಸ್ಥೆ ಇದೆ ಎಂದು ಸರ್ಕಾರ ಹೇಳುತ್ತಿದೆ. ಇದರಿಂದ ಸರ್ಕಾರದ ಬಳಿ ಹಣವಿಲ್ಲ ಎಂಬುದು ಸ್ಪಷ್ಟವಾಗುತ್ತದೆ.
ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R