ಕೃತಕ ಬುದ್ಧಿಮತ್ತೆ ಅಭಿವೃದ್ಧಿಯಲ್ಲಿ ನೈತಿಕ ಮೌಲ್ಯಗಳ ಅಳವಡಿಕೆ ಅತ್ಯಗತ್ಯ: ಚಂದ್ರಶೇಖರ್ ನಾಗರಾಜು
ಬಳ್ಳಾರಿ, 14 ನವೆಂಬರ್ (ಹಿ.ಸ.) ಕೃತಕ ಬುದ್ಧಿಮತ್ತೆ ಮತ್ತು ಸೂಪರ್ ಇಂಟೆಲಿಜೆನ್ಸ್ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ನೈತಿಕ ಮೌಲ್ಯಗಳು ಹಾಗೂ ಮಾನವೀಯ ತತ್ವಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಬೆಂಗಳೂರಿನ ಪಂಚಸೂತ್ರ ಅಕಾಡಮಿಯ ಮುಖ್ಯಸ್ಥ ಚಂದ್ರಶೇಖರ್ ನಾಗರಾಜು ಅಭಿಪ್ರಾಯಪಟ್ಟರು. ವೀರಶೈವ
ಎಐ ಮತ್ತು ಸೂಪರ್ ಇಂಟೆಲಿಜೆನ್ಸ್ನ ಅಭಿವೃದ್ಧಿಯಲ್ಲಿ ನೈತಿಕ ಮೌಲ್ಯಗಳ ಅಳವಡಿಕೆ ಅಗತ್ಯ : ಚಂದ್ರಶೇಖರ್ ನಾಗರಾಜು


ಬಳ್ಳಾರಿ, 14 ನವೆಂಬರ್ (ಹಿ.ಸ.)

ಕೃತಕ ಬುದ್ಧಿಮತ್ತೆ ಮತ್ತು ಸೂಪರ್ ಇಂಟೆಲಿಜೆನ್ಸ್ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ನೈತಿಕ ಮೌಲ್ಯಗಳು ಹಾಗೂ ಮಾನವೀಯ ತತ್ವಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಬೆಂಗಳೂರಿನ ಪಂಚಸೂತ್ರ ಅಕಾಡಮಿಯ ಮುಖ್ಯಸ್ಥ ಚಂದ್ರಶೇಖರ್ ನಾಗರಾಜು ಅಭಿಪ್ರಾಯಪಟ್ಟರು.

ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಹಾಗೂ ಭವಿಷ್ಯದ ಸೂಪರ್ ಇಂಟೆಲಿಜೆನ್ಸ್ ತಂತ್ರಜ್ಞಾನಗಳ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸ ನೀಡಿದ ಅವರು, ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ಮತ್ತು ಅದರ ಸಾಮಾಜಿಕ ಪರಿಣಾಮಗಳ ಕುರಿತು ವಿವರಿಸಿದರು.

ಕೃತಕ ಬುದ್ಧಿಮತ್ತೆಯ ವೇಗವಾದ ಬೆಳವಣಿಗೆ ಹಾಗೂ ಭವಿಷ್ಯದ ಸಾಧ್ಯತೆಗಳ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಈ ತಂತ್ರಜ್ಞಾನದ ಸುರಕ್ಷತೆ, ನೈತಿಕ ಹೊಂದಾಣಿಕೆ ಮತ್ತು ಮಾನವ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಕೇವಲ ತಾಂತ್ರಿಕ ಪ್ರಗತಿಗೆ ಒತ್ತು ನೀಡದೆ, ಆರಂಭಿಕ ಹಂತದಿಂದಲೇ ಮಾನವೀಯ ಮೌಲ್ಯಗಳು ಮತ್ತು ನೈತಿಕ ತತ್ವಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

2025ರ ಅಂತಾರಾಷ್ಟ್ರೀಯ ಉದಯೋನ್ಮುಖ ಗಣಕ ಮತ್ತು ಮಾಹಿತಿ ತಂತ್ರಜ್ಞಾನಗಳ ಸಮ್ಮೇಳನದಲ್ಲಿ ಪ್ರಶಸ್ತಿ ಪಡೆದ ತಮ್ಮ ಸಂಶೋಧನೆಯ ಕುರಿತು ವಿವರಿಸಿದ ಅವರು, ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳಲ್ಲಿ ಮೋಸಪೂರಿತ ಹೊಂದಾಣಿಕೆ ಹಾಗೂ ಮಾನವ ನಿಯಂತ್ರಣ ಕಳೆದುಕೊಳ್ಳುವ ಅಪಾಯಗಳಿವೆ ಎಂದು ಎಚ್ಚರಿಸಿದರು.

2030ರ ವೇಳೆಗೆ ಒಂದು ದಶಲಕ್ಷ ಎಂಜಿನಿಯರ್‌ಗಳು ಮತ್ತು ವೃತ್ತಿಪರರನ್ನು ಸೂಪರ್ ಇಂಟೆಲಿಜೆನ್ಸ್ ತಂತ್ರಜ್ಞಾನಕ್ಕೆ ಸನ್ನದ್ಧಗೊಳಿಸುವ ರಾಷ್ಟ್ರೀಯ ಉಪಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು. ಭಾರತೀಯ ಸನಾತನ ಜ್ಞಾನ ಪರಂಪರೆಯ ಪದವಿಧಿ ಸೂತ್ರದಿಂದ ಪ್ರೇರಣೆ ಪಡೆದು ರೂಪಿಸಿರುವ ಆರು ಹಂತಗಳ ನೈತಿಕ ಹೊಂದಾಣಿಕೆ ಚೌಕಟ್ಟಿನ ಮಹತ್ವವನ್ನು ವಿವರಿಸಿದರು.

ಭಾರತದ ಪ್ರಾಚೀನ ಜ್ಞಾನ ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನ ಸಂಶೋಧನೆಯನ್ನು ಸಮನ್ವಯಗೊಳಿಸುವ ಮೂಲಕ ಮಾನವ ಹಿತಾಸಕ್ತಿಗೆ ಪೂರಕವಾದ ಸುರಕ್ಷಿತ ಸೂಪರ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕೋರಿ ನಾಗರಾಜ್ ಮಾತನಾಡಿ, ಕೃತಕ ಬುದ್ಧಿಮತ್ತೆಯು ಭವಿಷ್ಯದ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳ ಕುರಿತು ಆಳವಾದ ಜ್ಞಾನ ಮತ್ತು ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande