ಗ್ರಾಮೀಣ ಮೂಲಭೂತ ಸೌಕರ್ಯಕ್ಕೆ ಮತ್ತಷ್ಟು ಬಲ: ಬಾವೂರು ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎಸ್. ನಾಡಗೌಡ ಭೂಮಿಪೂಜೆ
ವಿಜಯಪುರ, 14 ನವೆಂಬರ್ (ಹಿ.ಸ.) ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಸುಸಜ್ಜಿತ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ, ತಾಳಿಕೋಟಿ ತಾಲೂಕಿನ ಬಾವೂರು ಗ್ರಾಮದಲ್ಲಿ ನಿರ್ಮಿಸಲಿರುವ ನೂತನ ಸಿಸಿ (ಕಾಂಕ್ರೀಟ್) ರಸ್ತೆ ಕಾಮಗಾರಿಗೆ ಶಾಸಕರಾದ ಸಿ.ಎಸ್
ಸಿಸಿ ರಸ್ತೆ


ವಿಜಯಪುರ, 14 ನವೆಂಬರ್ (ಹಿ.ಸ.)

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಸುಸಜ್ಜಿತ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ, ತಾಳಿಕೋಟಿ ತಾಲೂಕಿನ ಬಾವೂರು ಗ್ರಾಮದಲ್ಲಿ ನಿರ್ಮಿಸಲಿರುವ ನೂತನ ಸಿಸಿ (ಕಾಂಕ್ರೀಟ್) ರಸ್ತೆ ಕಾಮಗಾರಿಗೆ ಶಾಸಕರಾದ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ಶಾಸ್ತ್ರೋಕ್ತವಾಗಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿ.ಎಸ್. ನಾಡಗೌಡ ಅವರು, ಮುದ್ದೇಬಿಹಾಳ ಮತಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ ಸಂಪರ್ಕ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಬಾವೂರು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಈ ನೂತನ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸ್ಥಳದಲ್ಲಿದ್ದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ ಶಾಸಕರು, ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಅತ್ಯುತ್ತಮವಾಗಿ ನಿರ್ಮಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ಶುಭ ಸಂದರ್ಭದಲ್ಲಿ ಬಾವೂರು ಗ್ರಾಮದ ಗುರು-ಹಿರಿಯರು, ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ನೂರಾರು ನಾಗರಿಕರು ಉಪಸ್ಥಿತರಿದ್ದು, ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande