ದಾವಣಗೆರೆ: ಕುಡಿಯುವ ನೀರು ಪೂರೈಸಲು ಮರೇನಹಳ್ಳಿ ಗ್ರಾಮಸ್ಥರ ಆಗ್ರಹ
ದಾವಣಗೆರೆ, 14 ನವೆಂಬರ್ (ಹಿ.ಸ.): ಮಳೆ ಕೊರತೆಯಿಂದಾಗಿ ಬರದ ಬವಣೆ ಎದುರಿಸುತ್ತಿರುವ ಗ್ರಾಮಸ್ಥರು ಇದೀಗ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಹಬ್ಬ ಹರಿದಿನಗಳಲ್ಲಿಯೂ ಸಂಭ್ರಮದಿಂದ ಕಾಲ ಕಳೆಯುವ ಬದಲು ನೀರಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಮರೇನಹಳ್ಳಿ ಗ್
Davanagere-Marenahalli-Villagers-Struggle-For-Drinking-Water-Amid-Drought


ದಾವಣಗೆರೆ, 14 ನವೆಂಬರ್ (ಹಿ.ಸ.):

ಮಳೆ ಕೊರತೆಯಿಂದಾಗಿ ಬರದ ಬವಣೆ ಎದುರಿಸುತ್ತಿರುವ ಗ್ರಾಮಸ್ಥರು ಇದೀಗ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಹಬ್ಬ ಹರಿದಿನಗಳಲ್ಲಿಯೂ ಸಂಭ್ರಮದಿಂದ ಕಾಲ ಕಳೆಯುವ ಬದಲು ನೀರಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿದೆ.

ಸಾವಿರಾರು ಜನಸಂಖ್ಯೆ ಹೊಂದಿರುವ ಮರೇನಹಳ್ಳಿ ಗ್ರಾಮದಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರು ಪೂರೈಸುತ್ತಿದ್ದ ಬೋರ್ವೆಲ್ಗಳು ಬತ್ತಿಹೋಗಿವೆ.

ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

ಆದರೆ, ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ನೀರು ಇಡೀ ಗ್ರಾಮದ ಜನರ ಅಗತ್ಯಕ್ಕೆ ಸಾಕಾಗುತ್ತಿಲ್ಲ. ಹೀಗಾಗಿ ನೀರು ಪಡೆಯಲು ಗ್ರಾಮಸ್ಥರು ಕಿಲೋಮೀಟರ್ಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ದಿನವಿಡೀ ನೀರಿನ ಟ್ಯಾಂಕರ್ಗಾಗಿ ಕಾಯುತ್ತಾ ಕಾಲ ಕಳೆಯುವಂತಾಗಿದೆ.

ಹಬ್ಬ ಹರಿದಿನಗಳ ಸಂದರ್ಭದಲ್ಲಿಯೂ ಅಡುಗೆ, ಸಂಭ್ರಮಾಚರಣೆಗಳನ್ನು ಬದಿಗಿಟ್ಟು ನೀರಿಗಾಗಿ ಕಾಯುವ ಸ್ಥಿತಿ ಗ್ರಾಮಸ್ಥರನ್ನು ಕಂಗೆಡಿಸಿದೆ. ಪ್ರತಿದಿನದ ಕುಡಿಯುವ ನೀರಿನ ಅಗತ್ಯವನ್ನೇ ಪೂರೈಸಿಕೊಳ್ಳಲು ಪರದಾಡುತ್ತಿರುವ ಜನರಿಗೆ ಟ್ಯಾಂಕರ್ ಮೂಲಕ ಸಿಗುತ್ತಿರುವ ನೀರು ಆನೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ.

ಗ್ರಾಮಸ್ಥರ ಅಳಲು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೋರ್ವೆಲ್ಗಳು ಬತ್ತಿಹೋಗಿರುವುದರಿಂದ ಟ್ಯಾಂಕರ್ ನೀರನ್ನೇ ಅವಲಂಬಿಸಬೇಕಾಗಿದೆ.

ಆದರೆ, ಟ್ಯಾಂಕರ್ ಮೂಲಕ ಪೂರೈಸುವ ನೀರು ಎಲ್ಲರಿಗೂ ಸಾಕಾಗುತ್ತಿಲ್ಲ. ನೀರಿಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೇಸಿಗೆ ಇನ್ನೂ ಆರಂಭವಾಗುವ ಮುನ್ನವೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದರ ಜೊತೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮರೇನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande