
ಬಾಗಲಕೋಟೆ, 14 ನವೆಂಬರ್ (ಹಿ.ಸ.)
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೆಬ್ಬಾಳ ಕ್ರಾಸ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ಬಿ. ತಿಮ್ಮಾಪುರ, ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹಾಗೂ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಹೆಬ್ಬಾಳ ಕ್ರಾಸ್‌ನಿಂದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಹೆಬ್ಬಾಳ ಕ್ರಾಸ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ವಿವಿಧ ಹಂತದ ಕಾಂಗ್ರೆಸ್ ನಾಯಕರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು ಎಂದು ಆರ್.ಬಿ. ತಿಮ್ಮಾಪುರ ಅವರ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande