ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ
ಬೆಳಗಾವಿ, 15 ನವೆಂಬರ್ (ಹಿ.ಸ.): ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಭಾನುವಾರ ನಡೆದಿದೆ. ಮೃತರನ್ನು ಪುಣೆ ಮೂಲದ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ
ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ


ಬೆಳಗಾವಿ, 15 ನವೆಂಬರ್ (ಹಿ.ಸ.):

ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಭಾನುವಾರ ನಡೆದಿದೆ.

ಮೃತರನ್ನು ಪುಣೆ ಮೂಲದ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಹಾಗೂ ನಾಲ್ಕು ವರ್ಷದ ಬಾಲಕ ದೇವಾಂಶ ಶ್ರೀಕಾಂತ ಮಾಂಡ್ರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಶ್ರೀಕಾಂತ ಮಾಂಡ್ರಿ (36), ವಂದನಾ (53) ಮತ್ತು ಹರ್ಷ (25) ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪುಣೆಯಿಂದ ಸವದತ್ತಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಹಾವೇರಿಯಿಂದ ಗೋಕಾಕಿಗೆ ಹತ್ತಿಕಾಳು ತುಂಬಿಕೊಂಡು ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಅವಸರದ ಚಾಲನೆ ಮತ್ತು ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande