ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಯುವಜನತೆಗೆ ಸ್ಫೂರ್ತಿ: ಆರ್. ಅಶೋಕ
ಬೆಂಗಳೂರು, 15 ನವೆಂಬರ್ (ಹಿ.ಸ.): ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡುತ್ತವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಅಭಿಪ್ರಾಯಪಟ್ಟರು. ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ
ಅಶೋಕ್


ಬೆಂಗಳೂರು, 15 ನವೆಂಬರ್ (ಹಿ.ಸ.):

ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡುತ್ತವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಅಭಿಪ್ರಾಯಪಟ್ಟರು.

ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ‘16ನೇ ಪ್ರತಿಭೋತ್ಸವ–2026 ಹಾಗೂ ವಿದ್ಯಾಮಾಣಿಕ್ಯಗಳಿಗೆ ಅಭಿನಂದನೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಅವರು, ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯವಾಗಿದೆ. ಇಂತಹ ಗೌರವಗಳು ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜತೆಗೆ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಾಸವಿ ಪೀಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಆರ್‌ವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಪಿ. ಶ್ಯಾಮ್, ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ, ಶಾಸಕ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ. ರವಿಶಂಕರ್ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande