ಕೆಪಿಎಸ್ಸಿ ಪರೀಕ್ಷೆಗೆ ಆತಂಕ ಬೇಡ, ಆತ್ಮವಿಶ್ವಾಸದಿಂದ ಎದುರಿಸಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, 15 ನವೆಂಬರ್ (ಹಿ.ಸ.): ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಜಾಮರ್‌ಗಳ ಅಳವಡಿಕೆ ಹಾಗೂ ಇಬ್ಬರು ಮೇಲ್ವಿಚಾರ
ಮುಖ್ಯಮಂತ್ರಿ ಎಕ್ಸ್ ಪೋಸ್ಟ್


ಬೆಂಗಳೂರು, 15 ನವೆಂಬರ್ (ಹಿ.ಸ.):

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಜಾಮರ್‌ಗಳ ಅಳವಡಿಕೆ ಹಾಗೂ ಇಬ್ಬರು ಮೇಲ್ವಿಚಾರಕರ ನೇಮಕ ಸೇರಿದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶವಿಲ್ಲದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪರೀಕ್ಷೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ ಎಂದು ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande