ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ನ ಇಬ್ಬಗೆಯ ನೀತಿ ಬಯಲು: ಆರ್. ಅಶೋಕ
ಬೆಂಗಳೂರು, 15 ನವೆಂಬರ್ (ಹಿ.ಸ.): ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್‌ನ ಇಬ್ಬಗೆಯ ನೀತಿ ಬಯಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರ ನೀರಿನ ಹಕ್ಕಿನ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ತಮಿಳುನಾಡಿನಲ್ಲಿ ತನ್ನದೇ ಪಕ್ಷದ ನಾಯಕರು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದರೂ ಮೌನ ವಹಿಸಿದೆ ಎ
ಪ್ರತಿಪಕ್ಷ ನಾಯಕ ಅಶೋಕ ಫೈಲ್ ಪೋಟೋ


ಬೆಂಗಳೂರು, 15 ನವೆಂಬರ್ (ಹಿ.ಸ.):

ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್‌ನ ಇಬ್ಬಗೆಯ ನೀತಿ ಬಯಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರ ನೀರಿನ ಹಕ್ಕಿನ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ತಮಿಳುನಾಡಿನಲ್ಲಿ ತನ್ನದೇ ಪಕ್ಷದ ನಾಯಕರು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದರೂ ಮೌನ ವಹಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಅಧಿಕಾರಕ್ಕಾಗಿ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ಘೋಷಣೆ ಕೂಗಿದ ಕಾಂಗ್ರೆಸ್, ಮೇಕೆದಾಟು ಪಾದಯಾತ್ರೆಯ ಮೂಲಕ ಕನ್ನಡಿಗರ ಭಾವನೆಗಳನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಆದರೆ, ಇದೀಗ ತನ್ನದೇ ಪಕ್ಷದ ತಮಿಳುನಾಡು ನಾಯಕರ ವಿರೋಧದ ಎದುರು ಮೌನವಾಗಿದೆ ಎಂದು ಟೀಕಿಸಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಟ್ಯಾಗೋರ್ ಅವರು ಮೇಕೆದಾಟು ಯೋಜನೆಯನ್ನು ಕಾನೂನುಬಾಹಿರ ಎಂದು ಬಣ್ಣಿಸಿ, ಯೋಜನೆ ತಡೆಯಲು ಕಾನೂನು ಕ್ರಮ ಕೈಗೊಳ್ಳುವಂತೆ ಅಲ್ಲಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಒತ್ತಾಯಿಸಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಕೂಡ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೇಕೆದಾಟು ಪರವಾಗಿ ಪಾದಯಾತ್ರೆ ನಡೆಸುವ ಕಾಂಗ್ರೆಸ್, ತಮಿಳುನಾಡಿನಲ್ಲಿ ಅದೇ ಯೋಜನೆಯ ವಿರುದ್ಧ ಕಾನೂನು ಹೋರಾಟಕ್ಕೆ ಒತ್ತಾಯಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರ ಪರ ಘೋಷಣೆ ಕೂಗುವ ಪಕ್ಷ, ತಮಿಳುನಾಡಿನಲ್ಲಿ ಕನ್ನಡಿಗರ ನೀರಿನ ಹಕ್ಕಿನ ವಿರುದ್ಧ ನಿಲುವು ತಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಪರವಾಗಿ ಭಾಷಣ ಮಾಡುವುದರಿಂದ ಮಾತ್ರ ಯೋಜನೆ ಅನುಷ್ಠಾನವಾಗುವುದಿಲ್ಲ. ತಮ್ಮದೇ ಪಕ್ಷದ ನಾಯಕರು ಯೋಜನೆ ತಡೆಯಲು ಮುಂದಾಗಿರುವಾಗ ಅವರು ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕದ ಮೇಲೆ ನಿಜವಾದ ಕಾಳಜಿ ಇದೆಯೇ? ರಾಹುಲ್ ಗಾಂಧಿ ಅವರಿಗೆ ಕರ್ನಾಟಕದ ನೀರಿನ ಹಕ್ಕು ಮುಖ್ಯವೇ ಅಥವಾ ತಮಿಳುನಾಡಿನ ರಾಜಕೀಯ ಲೆಕ್ಕಾಚಾರ ಮುಖ್ಯವೇ ಎಂಬುದನ್ನು ಸ್ಪಷ್ಟಪಡಿಸಬೇಕು. ಕರ್ನಾಟಕದಲ್ಲಿ ಅಧಿಕಾರ ಮತ್ತು ತಮಿಳುನಾಡಿನಲ್ಲಿ ರಾಜಕೀಯ ಮೈತ್ರಿ ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆ ಕನ್ನಡಿಗರ ಹಕ್ಕಾಗಿದ್ದು, ಅದನ್ನು ಚುನಾವಣಾ ಪ್ರಚಾರದ ಸರಕಾಗಿ ಬಳಸಿಕೊಳ್ಳಬಾರದು. ಕನ್ನಡಿಗರ ನೀರಿನ ಹಕ್ಕಿನ ವಿಚಾರದಲ್ಲಿ ರಾಜಕೀಯ ಮಾಡದೆ, ಮೊದಲು ತಮ್ಮ ಪಕ್ಷದ ತಮಿಳುನಾಡು ನಾಯಕರ ನಿಲುವಿಗೆ ಉತ್ತರ ನೀಡಬೇಕು ಎಂದು ಆರ್. ಅಶೋಕ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande