ಧಾರವಾಡ: ನ.17ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ
ಧಾರವಾಡ, 15 ನವೆಂಬರ್ (ಹಿ.ಸ.): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ನವೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ
ಧಾರವಾಡ: ನ.17ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ


ಧಾರವಾಡ, 15 ನವೆಂಬರ್ (ಹಿ.ಸ.):

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ನವೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜ ಕಲ್ಯಾಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಸಮುದಾಯಗಳ ಮುಖಂಡರು, ಗಣ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande