ರೌಡಿಗಳ ನಿಯಂತ್ರಣಕ್ಕೆ ಪ್ರತ್ಯೇಕ ಪಡೆ; ಭಯಮುಕ್ತ ಬೆಂಗಳೂರು ನಿರ್ಮಾಣ ಗುರಿ:ಸಿಎಂ
ಬೆಂಗಳೂರು, 15 ನವೆಂಬರ್ (ಹಿ.ಸ.): ಬೆಂಗಳೂರು ನಗರದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ರೌಡಿ ನಿಗ್ರಹ ಪಡೆ ರಚಿಸಲು ಸರ್ಕಾರ ಮುಂದಾಗಿದೆ. ರೌಡಿಗಳ ಚಟುವಟಿಕೆಗಳ ನಿಯಂತ್ರಣವನ್ನು ಸ್ಥಳೀಯ ಪೊಲೀಸ್ ಠಾಣೆಗಳ ಬದಲಿಗೆ ನೇರವಾಗಿ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಒಪ್ಪಿಸಲಾಗುವುದು ಎಂದು ಮುಖ
ಸಿಎಂ ಡಿ.ಕೆ.ಶಿವಕುಮಾರ್


ಬೆಂಗಳೂರು, 15 ನವೆಂಬರ್ (ಹಿ.ಸ.):

ಬೆಂಗಳೂರು ನಗರದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ರೌಡಿ ನಿಗ್ರಹ ಪಡೆ ರಚಿಸಲು ಸರ್ಕಾರ ಮುಂದಾಗಿದೆ. ರೌಡಿಗಳ ಚಟುವಟಿಕೆಗಳ ನಿಯಂತ್ರಣವನ್ನು ಸ್ಥಳೀಯ ಪೊಲೀಸ್ ಠಾಣೆಗಳ ಬದಲಿಗೆ ನೇರವಾಗಿ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಒಪ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೌಡಿಗಳ ಮೇಲೆ ಸ್ಥಳೀಯ ಪೊಲೀಸ್ ಠಾಣೆಗಳ ನಿಯಂತ್ರಣವನ್ನು ತಪ್ಪಿಸಿ, ಅವರ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನೇರವಾಗಿ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ನೀಡಲಾಗುವುದು. ರೌಡಿ ನಿಗ್ರಹ ಪಡೆಯೇ ಇಂತಹ ಚಟುವಟಿಕೆಗಳನ್ನು ಮಟ್ಟಹಾಕಲಿದೆ ಎಂದರು.

ರೌಡಿಗಳು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕ ಹೊಂದಿರುವುದು ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆಯೂ ಸರ್ಕಾರಕ್ಕೆ ಮಾಹಿತಿ ಇದೆ. ಇಂತಹ ಸಂಪರ್ಕಗಳಿಗೆ ಅವಕಾಶ ನೀಡದೆ, ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಬೆಂಗಳೂರಿನಲ್ಲಿ ಸಣ್ಣಪುಟ್ಟ ದುರ್ಘಟನೆಗಳೂ ನಡೆಯಬಾರದು ಎಂಬ ದೃಷ್ಟಿಯಿಂದ ಪ್ರತ್ಯೇಕ ಪಡೆ ರಚಿಸಲಾಗುತ್ತಿದೆ. ಭಯಮುಕ್ತ ಬೆಂಗಳೂರು ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ, ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಾಣಕ್ಕೂ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ದೊಡ್ಡ ಮಟ್ಟದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande