ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ
ಕಲಬುರಗಿ, 15 ನವೆಂಬರ್ (ಹಿ.ಸ.): ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಳಕುಂದಾ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರೊಂದಿಗೆ ಬೆರೆತ ಸಚಿವರು, ಅವರ ಕೆಲಸದ ಪರ
ಭೇಟಿ


ಕಲಬುರಗಿ, 15 ನವೆಂಬರ್ (ಹಿ.ಸ.):

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಳಕುಂದಾ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರೊಂದಿಗೆ ಬೆರೆತ ಸಚಿವರು, ಅವರ ಕೆಲಸದ ಪರಿಸ್ಥಿತಿ ಹಾಗೂ ಕೂಲಿ ಪಾವತಿ ಕುರಿತು ಮಾಹಿತಿ ಪಡೆದುಕೊಂಡರು.

ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಕೂಲಿಯನ್ನು ಸಮಯಕ್ಕೆ ಸರಿಯಾಗಿ ಪಾವತಿಸಬೇಕು. ಉದ್ಯೋಗ ಖಾತ್ರಿ ಯೋಜನೆಯ ಪ್ರಯೋಜನ ಪ್ರತಿಯೊಬ್ಬ ಅರ್ಹ ಕಾರ್ಮಿಕನಿಗೂ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande