
ಬಳ್ಳಾರಿ, 16 ನವೆಂಬರ್ (ಹಿ.ಸ.)
ಬಳ್ಳಾರಿ ತಾಲೂಕಿನ ಅಲ್ಲೀಪುರ ಗ್ರಾಮದ 30 ನೇ ವಾರ್ಡ್ ನಿವಾಸಿಯಾದ ಚಂದ್ರಶೇಖರ್ (38) ವ್ಯಕ್ತಿಯು ಸೆಪ್ಟೆಂಬರ್ 02 ರಂದು ಬಳ್ಳಾರಿಯಲ್ಲಿ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹಾಗೂ ಸಾಧಾರಣ ಮೈಕಟ್ಟು ಹೊಂದಿದ್ದು, ವ್ಯಕ್ತಿಯ ಎಡಗೈ ಮೇಲೆ ಚಂದ್ರಶೇಖರ್ ಮತ್ತು ರೇಣುಕಮ್ಮ ಎಂಬ ಹೆಸರಿನ ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕಪ್ಪು ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗ್ರಾಮೀಣ ಪೊಲೀಸ್ ಠಾಣೆ ದೂ.08392276461, ಮೊ.9480803049 ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್