
ಬಳ್ಳಾರಿ, 16 ನವೆಂಬರ್ (ಹಿ.ಸ.)
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬಳ್ಳಾರಿ (ನಗರ), ಬಳ್ಳಾರಿ (ಗ್ರಾಮಾಂತರ) ಹಾಗೂ ಸಂಡೂರು ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 02 ಅಂಗನವಾಡಿ ಕಾರ್ಯಕರ್ತೆ ಮತ್ತು 40 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಅದೇ ಗ್ರಾಮ ಅಥವಾ ವಾರ್ಡಿಗೆ ಸೇರಿದ ಅರ್ಹ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2026 ರ ಸಂಜೆ 5:30 ರವರೆಗೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸೂಚಿಸಲಾದ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟಿûಯಲ್ಲಿ ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ನಿಗದಿತಾವಧಿಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಬಳ್ಳಾರಿ: 7760974754, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಡೂರು: 08392-268609 (ಮೊಬೈಲ್: 9972813152), ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ (ನಗರ): 08395-261156 (ಮೊಬೈಲ್: 8867129009), ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ ಗ್ರಾಮೀಣ: 08392-266080 (ಮೊಬೈಲ್: 8050804012) ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್