ಕಲಬುರಗಿ: ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿ; ಓರ್ವ ಸಾವು
ಕಲಬುರಗಿ, 16 ನವೆಂಬರ್ (ಹಿ.ಸ.): ಎರಡು ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ಮತ್ತು ಜಿಲವರ್ಷ ಗ್ರಾಮದ ನಡುವಿನ ರಸ್ತೆಯಲ್ಲಿ ನಡೆದಿದೆ. ಶಾದಿಪುರ ಗ್ರಾಮದ ನಿವಾಸಿ ಶೌಕತ್ ಅಲಿ (60) ಮೃತಪಟ್ಟ ವ್ಯಕ್ತಿ.
Kalaburagi-Bike-Collision-One-Dead-One-Seriously-Injured


ಕಲಬುರಗಿ, 16 ನವೆಂಬರ್ (ಹಿ.ಸ.):

ಎರಡು ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ಮತ್ತು ಜಿಲವರ್ಷ ಗ್ರಾಮದ ನಡುವಿನ ರಸ್ತೆಯಲ್ಲಿ ನಡೆದಿದೆ.

ಶಾದಿಪುರ ಗ್ರಾಮದ ನಿವಾಸಿ ಶೌಕತ್ ಅಲಿ (60) ಮೃತಪಟ್ಟ ವ್ಯಕ್ತಿ. ಅಪಘಾತದಲ್ಲಿ ಗೋಪಾಲ್ ಚವ್ಹಾಣ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿಯಾದ ರಭಸಕ್ಕೆ ಶೌಕತ್ ಅಲಿ ಬೈಕ್ನಿಂದ ಕೆಳಗೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಕುಂಚಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande