
ಪೂಂಚ್, 16 ನವೆಂಬರ್ (ಹಿ.ಸ.):
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೋಮವಾರ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಸಮೀಪದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಸವ್ಜಿಯಾನ್ ವಲಯದ ಕನಾರಿ ಪ್ರದೇಶದಲ್ಲಿ ಗಡಿ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರು ಸೋಮವಾರ ನಸುಕಿನ ಜಾವ ಸುಮಾರು 1.30ರ ವೇಳೆಗೆ ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಯೋಧರು ಸಣ್ಣ ಶಸ್ತ್ರಾಸ್ತ್ರಗಳಿಂದ ಸುಮಾರು ಎರಡು ಡಜನ್ ಸುತ್ತು ಗುಂಡು ಹಾರಿಸಿದ್ದಾರೆ.
ಬಳಿಕ ಗಡಿ ದಾಟಿ ಉಗ್ರರು ಒಳನುಸುಳುವ ಸಾಧ್ಯತೆಯನ್ನು ತಡೆಯುವ ಉದ್ದೇಶದಿಂದ ಇಡೀ ಪ್ರದೇಶವನ್ನು ಸುತ್ತುವರಿದು ಭದ್ರತಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬೆಳಕು ಹರಿಯುತ್ತಿದ್ದಂತೆ ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ವರದಿ ಸಿದ್ಧಪಡಿಸುವ ಸಮಯದವರೆಗೂ ಕಾರ್ಯಾಚರಣೆ ಮುಂದುವರಿದಿತ್ತು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.