ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ
ಬಳ್ಳಾರಿ, 16 ನವೆಂಬರ್ (ಹಿ.ಸ.) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ಸೋಮವಾರ ನಡೆದ 2024-25ನೇ ಸಾಲಿನ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ
ವಿಎಸ್ಕೆಯು : ಮೂವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ


ವಿಎಸ್ಕೆಯು : ಮೂವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ


ಬಳ್ಳಾರಿ, 16 ನವೆಂಬರ್ (ಹಿ.ಸ.)

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ಸೋಮವಾರ ನಡೆದ 2024-25ನೇ ಸಾಲಿನ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ರಾಜ್ಯಪಾಲೆ ಡಾ. ಸುಧಾ ಯಾದವ್ ಹಾಗೂ ಕರ್ನಾಟಕ ಮತ್ತು ಒಡಿಶಾ ಉಚ್ಚ ನ್ಯಾಯಾಲಯಗಳ ನಿವೃತ್ತ ನ್ಯಾಯಮೂರ್ತಿ ಡಾ. ಕೃಷ್ಣ ಎಸ್. ದೀಕ್ಷಿತ್ ಅವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಅಭಿನಂದಿಸಿದರು.

ಗೌರವ ಡಾಕ್ಟರೇಟ್ ಪುರಸ್ಕೃತರು:

ಡಾ. ಹೆನ್ರಿ ಡಿಸೋಜಾ: ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಗಾಗಿ. ಇವರು ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಆಗಿದ್ದಾರೆ.

ಚನ್ನಬಸವಣ್ಣ ಸಿ. (ಲೋಹಿಯಾ ಚನ್ನಬಸವಣ್ಣ): ಸಾಹಿತ್ಯ, ಪರಿಸರ ಸಂರಕ್ಷಣೆ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿನ ಸಾಧನೆಗಾಗಿ.

ಗೀತಾ ನಾಗಪಾಲ್: ಶಿಕ್ಷಣ, ಕಲೆ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿನ ಕೊಡುಗೆ ಹಾಗೂ ಕೃಪಾನಿಧಿ ಶಿಕ್ಷಣ ಸಂಸ್ಥೆಗಳ ಸಹಸಂಸ್ಥಾಪಕರಾಗಿ ಸಲ್ಲಿಸಿರುವ ಸೇವೆಗಾಗಿ.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ವಿ. ಲೋಕೇಶ್, ಮೌಲ್ಯಮಾಪನ ಕುಲಸಚಿವ ಪ್ರೊ. ಪಿ. ಕಣ್ಣನ್, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಮಹಾವಿದ್ಯಾಲಯಗಳ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande