ವಿಧಾನ ಪರಿಷತ್ ಸದಸ್ಯರಾಗಿ ನಾಲ್ವರು ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, 16 ನವೆಂಬರ್ (ಹಿ.ಸ.): ಕರ್ನಾಟಕ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನಡೆದ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ನಾಲ್ವರು ನೂತನ ಸದಸ್ಯರು ಸೋಮವಾರ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂ
four-new-mlcs-take-oath-in-karnataka-legislative-council


ಬೆಂಗಳೂರು, 16 ನವೆಂಬರ್ (ಹಿ.ಸ.):

ಕರ್ನಾಟಕ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನಡೆದ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ನಾಲ್ವರು ನೂತನ ಸದಸ್ಯರು ಸೋಮವಾರ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರು ಪ್ರಮಾಣ ವಚನ ಸ್ವೀಕರಿಸಿದ ನೂತನ ಸದಸ್ಯರಾಗಿದ್ದಾರೆ. ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಆಯ್ಕೆಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಗತಿಯ ಪ್ರಮುಖ ಶಕ್ತಿಯಾಗಿದ್ದಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗಿ ನೂತನ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಆಶಿಸಿದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸದಸ್ಯರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ವಿಧಾನ ಪರಿಷತ್ತಿನ ಘನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande