

ಬಳ್ಳಾರಿ, 16 ನವೆಂಬರ್ (ಹಿ.ಸ.)
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಕೇಂದ್ರ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ರಾಷ್ಟ್ರೀಯ ಸೇವಾಯೋಜನಾ ಘಟಕದ ಸಹಯೋಗದಲ್ಲಿ ‘ಜನಜಾತೀಯ ಗೌರವ ದಿವಸ್' ಅನ್ನು ಸೋಮವಾರ ಆಚರಿಸಲಾಯಿತು.
ಬುಡಕಟ್ಟು ಸ್ವಾತಂತ್ರ್ಯ ಸೇನಾನಿ ಹಾಗೂ ಹೋರಾಟಗಾರ ಬಿರ್ಸಾ ಮುಂಡಾ ಅವರ 151 ನೇ ಜನ್ಮ ದಿನಾಚರಣೆ ಅಂಗವಾಗಿ ಬಳ್ಳಾರಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬುಡಕಟ್ಟು ಸಮುದಾಯಗಳ ಅಮೂಲ್ಯ ಕೊಡುಗೆಯನ್ನು ಹಾಗೂ ಭಾರತೀಯ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಅವರು ಮಾಡಿದ ಬಲಿದಾನವನ್ನು ಸ್ಮರಿಸಲು 2021 ನೇ ವರ್ಷದ 75ನೇ ಅಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಪ್ರತಿ ವರ್ಷ ನವೆಂಬರ್ 15 ರಂದು `ಜನಜಾತೀಯ ಗೌರವ ದಿವಸ್’ ಆಚರಿಸಲು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ್ದರು.
ಬಳ್ಳಾರಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ. ಸುಲೇಖಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ಉಪನ್ಯಾಸಕ ಶಾಮಣ್ಣ ಅವರು ಸಂಪನ್ಮೂಲ ವ್ಯಕ್ರಿಗಳಾಗಿದ್ದರು.
ಭಗವಾನ್ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್