ನವೆಂಬರ್ 19ರಂದು ದಿಶಾ ಸಮಿತಿ ಸಭೆ
ಬಳ್ಳಾರಿ, 17 ನವೆಂಬರ್ (ಹಿ.ಸ.) ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ‘ದಿಶಾ’ ಸಮಿತಿಯ ಮಾಸಿಕ ಸಭೆಯು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರು ಹಾಗೂ ದಿಶಾ ಸಮಿತಿಯ ಅಧ್ಯಕ್ಷರಾದ ಈ. ತುಕಾರಾಮ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅ
ನವೆಂಬರ್ 19ರಂದು ದಿಶಾ ಸಮಿತಿ ಸಭೆ


ಬಳ್ಳಾರಿ, 17 ನವೆಂಬರ್ (ಹಿ.ಸ.)

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ‘ದಿಶಾ’ ಸಮಿತಿಯ ಮಾಸಿಕ ಸಭೆಯು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರು ಹಾಗೂ ದಿಶಾ ಸಮಿತಿಯ ಅಧ್ಯಕ್ಷರಾದ ಈ. ತುಕಾರಾಮ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಯಲಿದೆ.

ಅಹವಾಲು ಸ್ವೀಕಾರ ಕಾರ್ಯಕ್ರಮ:

ಸಭೆ ಆರಂಭಕ್ಕೂ ಮುನ್ನ, ಅದೇ ದಿನ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಂಬಂಧಿತ ಅಧಿಕಾರಿಗಳು ಬೆಳಿಗ್ಗೆ 9.30 ಗಂಟೆಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande