
ಕಲಬುರಗಿ, 17 ನವೆಂಬರ್ (ಹಿ.ಸ.):
ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಎರಡು ಆಟೋಮೊಬೈಲ್ ಗ್ಯಾರೇಜ್ಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜವಳಿ ಆಟೋಮೊಬೈಲ್ ಹಾಗೂ ಸ್ಟಾರ್ ಕಾರ್ ಗ್ಯಾರೇಜ್ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಂಜೂರು ದಫೇದಾರ್ ಹಾಗೂ ರಫೀಕ್ ಜವಳಿ ಅವರಿಗೆ ಸೇರಿದ ಎರಡೂ ಗ್ಯಾರೇಜ್ಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಹೋಗಿವೆ.
ಗ್ಯಾರೇಜ್ಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಟೋಮೊಬೈಲ್ ಬಿಡಿಭಾಗಗಳು, ಉಪಕರಣಗಳು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆಯಿಂದ ಮಾಲೀಕರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R