ಸ್ಟಿಂಗ್ ಆಪರೇಷನ್ ಪ್ರಕರಣ: ವಿಚಾರಣೆಗೆ ಹಾಜರಾದ ಕೃಪಾ ಆಳ್ವ
ಬೆಂಗಳೂರು, 17 ನವೆಂಬರ್ (ಹಿ.ಸ.): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಕೃಪಾ ಆಳ್ವ ಅವರನ್ನು ಮೂರನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಸ್ಟಿಂಗ್ ಆಪರೇಷನ್ಗ
Krupa-Alva-Appears-for-Third-Time-in-Stamp-Operation-Case-Refuses-to-Hand-Over-Mobile-Phone


ಬೆಂಗಳೂರು, 17 ನವೆಂಬರ್ (ಹಿ.ಸ.):

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಕೃಪಾ ಆಳ್ವ ಅವರನ್ನು ಮೂರನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ್ದಾರೆ.

ಆದರೆ, ಸ್ಟಿಂಗ್ ಆಪರೇಷನ್ಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್ಗಳನ್ನು ಪೊಲೀಸರಿಗೆ ಹಸ್ತಾಂತರಿಸಲು ಅವರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯ ಸಂಗ್ರಹಿಸಲು ಮುಂದಾಗಿರುವ ಸಿಸಿಬಿ ಪೊಲೀಸರು, ವಿಡಿಯೋ ಚಿತ್ರೀಕರಣಕ್ಕೆ ಬಳಸಲಾದ ಮೂಲ ಮೊಬೈಲ್ ಫೋನ್ ಹಾಗೂ ಪ್ರಸ್ತುತ ಕೃಪಾ ಆಳ್ವ ಅವರು ಬಳಸುತ್ತಿರುವ ಮೊಬೈಲ್ ಫೋನ್ ಅನ್ನು ತನಿಖೆಗೆ ಒಪ್ಪಿಸುವಂತೆ ಸೂಚಿಸಿದ್ದಾರೆ. ಆದರೆ, ಈವರೆಗೆ ಮೊಬೈಲ್ ಹಸ್ತಾಂತರಿಸದಿರುವುದು ತನಿಖಾಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.

ವಿಚಾರಣೆ ವೇಳೆ ಪ್ರತಿಕ್ರಿಯಿಸಿರುವ ಕೃಪಾ ಆಳ್ವ, “ಘಟನೆ ನಡೆದ ದಿನ ನಾನು ಆ ಸ್ಥಳದಲ್ಲಿದ್ದಿದ್ದು ನಿಜ. ಆದರೆ, ಅಲ್ಲಿ ಯಾರೋ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಅಲ್ಲದೆ, ಅಂದು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಈಗಾಗಲೇ ಬದಲಾಯಿಸಿರುವುದಾಗಿಯೂ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸುವುದರ ಜತೆಗೆ, ಅಳಿಸಿಹಾಕಿರುವ ಸಾಧ್ಯತೆಯಿರುವ ದತ್ತಾಂಶಗಳನ್ನು ಮರುಪಡೆಯುವುದು ತನಿಖೆಯ ಪ್ರಮುಖ ಉದ್ದೇಶವಾಗಿದೆ.

ಮೊಬೈಲ್ ಫೋನ್ಗಳನ್ನು ನೀಡುವಂತೆ ಪೊಲೀಸರು ಸೂಚಿಸಿದಾಗ, ಬುಧವಾರ ಫೋನ್ ತಂದು ಹಸ್ತಾಂತರಿಸುವುದಾಗಿ ಕೃಪಾ ಆಳ್ವ ತಿಳಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಮೊಬೈಲ್ ಹಸ್ತಾಂತರಿಸುವ ವಿಚಾರದಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಟ್ಟಾರೆ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ಮೂಲ ವಿಡಿಯೋ, ಅದರ ಚಿತ್ರೀಕರಣಕ್ಕೆ ಬಳಸಿದ ಮೊಬೈಲ್ ಹಾಗೂ ಡಿಜಿಟಲ್ ಸಾಕ್ಷ್ಯಗಳ ಸುತ್ತ ತನಿಖೆ ಕೇಂದ್ರೀಕೃತವಾಗಿದ್ದು, ಮುಂದಿನ ವಿಚಾರಣೆಯಲ್ಲಿ ಯಾವ ಮಾಹಿತಿ ಹೊರಬೀಳಲಿದೆ ಎಂಬ ಕುತೂಹಲ ಮೂಡಿದೆ.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande