ನ. 18: ತುಂಗಭದ್ರ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಮಿತಿ ಸಭೆ
ಬಳ್ಳಾರಿ, 17 ನವೆಂಬರ್ (ಹಿ.ಸ.) ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಅವಧಿ ಹಾಗೂ ಹಿಂಗಾರು ಹಂಗಾಮಿನ 128ನೇ ತುಂಗಭದ್ರ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯನ್ನು ನವೆಂಬರ್ 18 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗ
ನ. 18: ತುಂಗಭದ್ರ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಮಿತಿ ಸಭೆ


ಬಳ್ಳಾರಿ, 17 ನವೆಂಬರ್ (ಹಿ.ಸ.)

ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಅವಧಿ ಹಾಗೂ ಹಿಂಗಾರು ಹಂಗಾಮಿನ 128ನೇ ತುಂಗಭದ್ರ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯನ್ನು ನವೆಂಬರ್ 18 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ವಿಕಾಸಸೌಧದ 3ನೇ ಮಹಡಿಯ ಕೋಣೆ ಸಂಖ್ಯೆ: 313 ರಲ್ಲಿ ಕರೆಯಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ್ ಎಸ್. ತಂಗಡಗಿ ಅವರ ಅಧ್ಕ್ಯತೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಸಲಹೆ-ಸೂಚನೆಗಳನ್ನು ನೀಡುವಂತೆ ತುಂಗಭದ್ರ ಯೋಜನೆ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರ ಎಸ್. ಬಿ. ಮಲ್ಲಿಗವಾಡ ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande