ನ.23 : ಬಳ್ಳಾರಿ ಶ್ರೀ ಕನಕದುರ್ಗಮ್ಮ ಹುಂಡಿ ಎಣಿಕೆ
ಬಳ್ಳಾರಿ, 17 ನವೆಂಬರ್ (ಹಿ.ಸ.) ಬಳ್ಳಾರಿ ನಗರದ ಪ್ರಸಿದ್ಧ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಹುಂಡಿಗಳು ತುಂಬಿರುವ ಹಿನ್ನೆಲೆಯಲ್ಲಿ, ಹುಂಡಿಗಳನ್ನು ತೆರೆದು ಹಣ ಎಣಿಕೆ ಮಾಡಲು ದಿನಾಂಕ ನಿಗದಿಪಡಿಸಲಾಗಿದ್ದು, ನವೆಂಬರ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ
ನ.23 : ಬಳ್ಳಾರಿ ಶ್ರೀ ಕನಕದುರ್ಗಮ್ಮ ಹುಂಡಿ ಎಣಿಕೆ


ಬಳ್ಳಾರಿ, 17 ನವೆಂಬರ್ (ಹಿ.ಸ.)

ಬಳ್ಳಾರಿ ನಗರದ ಪ್ರಸಿದ್ಧ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಹುಂಡಿಗಳು ತುಂಬಿರುವ ಹಿನ್ನೆಲೆಯಲ್ಲಿ, ಹುಂಡಿಗಳನ್ನು ತೆರೆದು ಹಣ ಎಣಿಕೆ ಮಾಡಲು ದಿನಾಂಕ ನಿಗದಿಪಡಿಸಲಾಗಿದ್ದು, ನವೆಂಬರ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯವನ್ನು ಕೈಗೊಳ್ಳಲಾಗುವುದು.

ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಹುಂಡಿ ಎಣಿಕೆ ಕಾರ್ಯವು ಸಂಪೂರ್ಣ ಪಾರದರ್ಶಕವಾಗಿರಲು ಕಂದಾಯ ಇಲಾಖೆ, ಪೊಲೀಸ್ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರ ಹಾಗೂ ದೇವಸ್ಥಾನದ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆಸಲಾಗುವುದು. ಅಲ್ಲದೆ, ನಿಯಮಾನುಸಾರ ಹುಂಡಿ ಎಣಿಕೆ ಕಾರ್ಯದ ವೀಡಿಯೋ ಚಿತ್ರೀಕರಣವನ್ನು ಕಡ್ಡಾಯಗೊಳಿಸಲಾಗಿದೆ.

ಎಣಿಕೆ ಮುಗಿದ ಕೂಡಲೇ ಹಣವನ್ನು ದೇವಸ್ಥಾನದ ಉಳಿತಾಯ ಖಾತೆಗೆ ಜಮೆ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande