
ಗದಗ, 17 ನವೆಂಬರ್ (ಹಿ.ಸ.)
ದತ್ತು ಪ್ರಕ್ರಿಯೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯಿತಿ ಸಿಬ್ಬಂದಿಗಳಿಗೆ ದತ್ತು ಮಾಸಾಚರಣೆ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿ ಮೇಲ್ವಿಚಾರಕ ಮಹೇಶ ಕೆಂಗಾರ ಅವರು ದತ್ತು ಕಾಯ್ದೆ ಹಾಗೂ ಕಾನೂನುಬದ್ಧ ದತ್ತು ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಮಾತನಾಡಿ, ದತ್ತು ಕಾರ್ಯಕ್ರಮ ಉತ್ತಮವಾದ ಸಾಮಾಜಿಕ ಕಾರ್ಯವಾಗಿದ್ದು, ಕಾನೂನುಬದ್ಧ ಪ್ರಕ್ರಿಯೆಯ ಮೂಲಕ ಮಗುವಿಗೆ ಹಕ್ಕುಗಳನ್ನು ಒದಗಿಸಲು ಸಾಧ್ಯವಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಹಾಯ ಅಥವಾ ಸಹಕಾರ ಅಗತ್ಯವಿದ್ದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ನೆರವು ನೀಡಲಾಗುವುದು ಎಂದು ಮಾಹಿತಿ ತಿಳಿಸಿದರು.
ಬಳಿಕ ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ) ವಿದ್ಯಾ ಕಿತ್ತೂರು ಅವರು ತಾಲೂಕು ಪಂಚಾಯಿತಿ ಸಿಬ್ಬಂದಿಗಳಿಗೆ ದತ್ತು ಕಾರ್ಯಕ್ರಮದ ಸಂಕಲ್ಪ ಬೋಧಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕ ಸಂತೋಷಕುಮಾರ ಪಾಟೀಲ, ತಾಲೂಕು ಪಂಚಾಯಿತಿ ಸಿಬ್ಬಂದಿಯವರು ಎನ್ಆರ್ಎಲ್ಎಂ ಸಿಬ್ಬಂದಿಯವರು ಹಾಗೂ ಅಕ್ಷರ ದಾಸೋಹ ಇಲಾಖೆಯ ಸಿಬ್ಬಂದಿ ಯವರು ಮತ್ತು ಮಹಿಳಾ ಒಕ್ಕೂಟದ ಸಿಬ್ಬಂದಿ ಯವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP