
ಬಳ್ಳಾರಿ, 17 ನವೆಂಬರ್ (ಹಿ.ಸ.)
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬಳ್ಳಾರಿ ನಗರದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 31 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ವಾರ್ಡಿನವರಾಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2026 ರ ಸಂಜೆ 5:30 ರವರೆಗೆ
ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗಳ ವಿವರಗಳನ್ನು ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂಬ0ಧಪಟ್ಟ ಶಿಸು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.
ಕಚೇರಿ ವೇಳೆಯಲ್ಲಿ ಹೆಚ್ಚಿನ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ (ನಗರ) ಅಥವಾ ದೂರವಾಣಿ ಸಂಖ್ಯೆಗಳಾದ 9972813152, 08392-268609 ಗೆ ಸಂಪರ್ಕಿಸಬಹುದಾಗಿದೆ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್