
ವಿಜಯಪುರ, 17 ನವೆಂಬರ್ (ಹಿ.ಸ.):
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಡೆತನದ ಸಿದ್ದಸಿರಿ ಸಹಕಾರಿ ಬ್ಯಾಂಕ್ನಲ್ಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಆರಂಭಿಸಿದೆ ಎಂದು ರಮೇಶ ಬಿದನೂರ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಸಿದ್ದಸಿರಿ ಸಹಕಾರಿ ಬ್ಯಾಂಕ್ನಲ್ಲಿನ ಅವ್ಯವಹಾರದ ವಿಚಾರ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಆರಂಭಿಸಿರುವ ಕುರಿತು ಮಾಹಿತಿ ನೀಡಿದರು.
ಇದಕ್ಕೂ ಮೂರು ದಿನಗಳ ಹಿಂದೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಬ್ಯಾಂಕ್ಗೆ ಯಾವುದೇ ತನಿಖಾ ತಂಡದ ಅಧಿಕಾರಿಗಳು ಬಂದಿಲ್ಲ. ಬ್ಯಾಂಕ್ನಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿರುವ ವಿಚಾರವನ್ನು ರಮೇಶ ಬಿದನೂರ ಬಹಿರಂಗಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ನಲ್ಲಿನ ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿಯನ್ನು ಮುಂದಿಟ್ಟ ರಮೇಶ ಬಿದನೂರ, ಪ್ರಕರಣದ ತನಿಖೆ ಹಾಗೂ ಬ್ಯಾಂಕ್ನ ವ್ಯವಹಾರಗಳ ಕುರಿತು ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R