ತಾಳಿಕೋಟೆಯಲ್ಲಿ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ
ವಿಜಯಪುರ, 17 ನವೆಂಬರ್ (ಹಿ.ಸ.) ಕಮತಗಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ ನೂತನ ಶಾಖೆಯನ್ನು ತಾಳಿಕೋಟಿ ಪಟ್ಟಣದಲ್ಲಿ ಉದ್ಘಾಟಿಸಿ, ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಶುಭ ಹಾರೈಸಲಾಯಿತು ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ತಿಳಿಸಿದ್ದಾರೆ ಸಹಕಾರಿ ಕ್ಷೇತ್ರವು ಜನರ
ನೂತನ ಶಾಖೆ


ವಿಜಯಪುರ, 17 ನವೆಂಬರ್ (ಹಿ.ಸ.)

ಕಮತಗಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ ನೂತನ ಶಾಖೆಯನ್ನು ತಾಳಿಕೋಟಿ ಪಟ್ಟಣದಲ್ಲಿ ಉದ್ಘಾಟಿಸಿ, ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗೆ ಶುಭ ಹಾರೈಸಲಾಯಿತು ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ತಿಳಿಸಿದ್ದಾರೆ

ಸಹಕಾರಿ ಕ್ಷೇತ್ರವು ಜನರ ಆರ್ಥಿಕ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಘಗಳು ಪ್ರಮುಖ ಆಧಾರವಾಗಿವೆ. ಜನರಿಗೆ ಸುಲಭವಾಗಿ ಆರ್ಥಿಕ ಸೇವೆಗಳನ್ನು ಒದಗಿಸುವುದರ ಜೊತೆಗೆ, ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ.

ತಾಳಿಕೋಟಿಯಲ್ಲಿ ನೂತನ ಶಾಖೆ ಆರಂಭಿಸಿರುವುದರಿಂದ ಈ ಭಾಗದ ಜನರಿಗೆ ಸಹಕಾರಿ ಸೇವೆಗಳನ್ನು ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ. ನೂತನ ಶಾಖೆಯ ಮೂಲಕ ಗ್ರಾಹಕರಿಗೆ ಉತ್ತಮ, ಗುಣಮಟ್ಟದ ಹಾಗೂ ಜನಸ್ನೇಹಿ ಸೇವೆ ದೊರೆಯುವಂತಾಗಲಿ. ಸಂಘವು ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಸಹಕಾರಿ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಆಶಯ ವ್ಯಕ್ತಪಡಿಸಲಾಯಿತು.

ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘವು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು, ಜನರ ಆರ್ಥಿಕ ಸಬಲೀಕರಣಕ್ಕೆ ಮತ್ತಷ್ಟು ಕೊಡುಗೆ ನೀಡುವ ಮೂಲಕ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ. ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಪರಿಶ್ರಮದಿಂದ ಸಂಸ್ಥೆಯು ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಖಾಸಗತೇಶ್ವರ ಮಠದ ಪೀಠಾಧಿಪತಿ ಶ್ರೀ ಸಿದ್ದಲಿಂಗ ದೇವರು ಉಪಸ್ಥಿತರಿದ್ದರು. ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande