ಸೋನಿಯಾ ಗಾಂಧಿ ಆತ್ಮಚರಿತ್ರೆ ಓದುವ ಬದಲು ಸುದ್ದಿ ವಾಹಿನಿಗಳನ್ನು ನೋಡಿ: ಕಾಂಗ್ರೆಸ್ ನಾಯಕರಿಗೆ ಯದುವೀರ್ ತಿರುಗೇಟು
ಮೈಸೂರು, 17 ನವೆಂಬರ್ (ಹಿ.ಸ.): ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಹಾಗೂ ಕಾಂಗ್ರೆಸ್ ಪಕ್ಷದ ದಾಖಲೆಗಳನ್ನು ಓದುವ ಬದಲು ಸುದ್ದಿ ವಾಹಿನಿಗಳನ್ನು ನೋಡಲಿ. ಆಗ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ತಿಳಿಯಲಿದೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡ
Yaduveer-Wadiyar-Targets-Congress-Over-Sonia-Gandhi-Autobiography-BJP-State-President-Post


ಮೈಸೂರು, 17 ನವೆಂಬರ್ (ಹಿ.ಸ.):

ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಹಾಗೂ ಕಾಂಗ್ರೆಸ್ ಪಕ್ಷದ ದಾಖಲೆಗಳನ್ನು ಓದುವ ಬದಲು ಸುದ್ದಿ ವಾಹಿನಿಗಳನ್ನು ನೋಡಲಿ. ಆಗ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ತಿಳಿಯಲಿದೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಆ ಪುಸ್ತಕವನ್ನು ಓದುವುದಿಲ್ಲ. ಓದಲು ನನ್ನ ಬಳಿ ಬೇರೆ ಪುಸ್ತಕಗಳಿವೆ. ಆ ಪುಸ್ತಕದಲ್ಲಿ ಅರ್ಧ ಸತ್ಯ, ಅರ್ಧ ಸುಳ್ಳು ಇರಬಹುದು. ಕಾಂಗ್ರೆಸ್ ಇತಿಹಾಸವೇ ಹಾಗೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಅವರ ಪುಸ್ತಕ ಹಾಗೂ ಪಕ್ಷದ ದಾಖಲೆಗಳನ್ನು ಓದುವುದನ್ನು ಬಿಟ್ಟು ಸುದ್ದಿ ವಾಹಿನಿಗಳನ್ನು ವೀಕ್ಷಿಸಲಿ. ಆಗ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ತಿಳಿಯಲಿದೆ ಎಂದು ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದರು.

ರಾಜ್ಯಾಧ್ಯಕ್ಷರ ಆಯ್ಕೆ ಹೈಕಮಾಂಡ್ ನಿರ್ಧಾರ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಕ್ಷಣಕಾಲ ಅಚ್ಚರಿಗೊಂಡ ಯದುವೀರ್, 'ನಾನು ರಾಜ್ಯಾಧ್ಯಕ್ಷನಾ?' ಎಂದು ಮರುಪ್ರಶ್ನಿಸಿದರು.

ನಂತರ ಪ್ರತಿಕ್ರಿಯಿಸಿ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅರ್ಹತೆ ಮತ್ತು ಸಾಮರ್ಥ್ಯ ಹೊಂದಿರುವವರನ್ನು ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಯಾರೇ ಅಧ್ಯಕ್ಷರಾದರೂ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಬೇಕು. ಹಾಲಿ ಅಧ್ಯಕ್ಷರೇ ಮುಂದುವರಿದರೂ ಸಂತೋಷ, ಬೇರೆಯವರು ಆಯ್ಕೆಯಾದರೂ ಸಂತೋಷ ಎಂದರು.

ನಮ್ಮ ಇತಿಮಿತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. ಈ ಬಾರಿ ಬಿಜೆಪಿ ಮತ್ತಷ್ಟು ಬಲವರ್ಧನೆಯಾಗಲಿದೆ. ಯಾರೇ ಅಧ್ಯಕ್ಷರಾದರೂ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನಡೆಯುತ್ತಿರುವ ಪೈಪೋಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯೂರಿನಲ್ಲಿ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಚುನಾವಣೆ ಗೆಲ್ಲುವುದೇ ನಮ್ಮ ಗುರಿಯಾಗಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande