
ಬಳ್ಳಾರಿ, 18 ನವೆಂಬರ್ (ಹಿ.ಸ.)
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಿಲ್ಲಾ ಆಯ್ಕೆ ಸಮಿತಿಗೆ, ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಒಬ್ಬ ಅಧಿಕಾರೇತರ ನಾಮ ನಿರ್ದೇಶನ ಸದಸ್ಯರನ್ನಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಇವರಿಂದ 02 ವರ್ಷ ಅವಧಿಗೆ ಈ ನಾಮನಿರ್ದೇಶನ ನಡೆಯಲಿದೆ.
*ಅರ್ಹತೆಗಳು:*
ನಾಮನಿರ್ದೇಶನ ಬಯಸುವ ವ್ಯಕ್ತಿಯು ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಠ 15 ವರ್ಷ ವಾಸವಾಗಿರಬೇಕು. ವಯೋಮಿತಿಯು ಕನಿಷ್ಠ 35 ವರ್ಷ ಹಾಗೂ ಗರಿಷ್ಠ 65 ವರ್ಷದ ಒಳಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡಿರಬೇಕು.
ಬಳ್ಳಾರಿ ಜಿಲ್ಲೆಯ ಸಮಗ್ರ ಮಾಹಿತಿ, ವಿಶ್ವಕರ್ಮ ಜನಾಂಗದವರು ವಾಸಿಸುವ ಸ್ಥಳ ಹಾಗೂ ಕೈಗೊಳ್ಳುವ ಉದ್ಯೋಗ ಇತ್ಯಾದಿ ಅಂಕಿ-ಅ0ಶಗಳ ಮಾಹಿತಿ ತಿಳಿದಿರಬೇಕು. ಅರ್ಜಿ ಸಲ್ಲಿಸುವ ವ್ಯಕ್ತಿಯ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು ಹಾಗೂ ದಂಡ/ಜೈಲು ಶಿಕ್ಷೆ ಅನುಭವಿಸಿರಬಾರದು.
ಆಸಕ್ತರು ತಮ್ಮ ಸ್ವ-ಲಿಖಿತ ಪೂರ್ಣ ವಿವರಗಳೊಂದಿಗೆ ನವೆಂಬರ್ 23 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ತದನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ಜಿಲ್ಲಾಡಳಿತ ಭವನ, 2ನೇ ಮಹಡಿ, ಕೊಠಡಿ ಸಂಖ್ಯೆ 53, ಅನಂತಪುರ ರಸ್ತೆ, ಬಳ್ಳಾರಿ ಅಥವಾ ದೂರವಾಣಿ ಸಂಖ್ಯೆ: 08392-267038 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್