
ದಾವಣಗೆರೆ, 18 ನವೆಂಬರ್ (ಹಿ.ಸ.):
ದಾವಣಗೆರೆ ತಾಲೂಕಿನ ಗುಡಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರ ನಡುವೆ ತೆರಳಿದ ಸಚಿವರು, ಜನರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ಬೋರ್ವೆಲ್ ಮೂಲಕ ನೀರು ಪೂರೈಕೆಯಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು.
ಗ್ರಾಮದಲ್ಲಿ ನೀರಿನ ಅಭಾವ ಹೆಚ್ಚಾಗಿರುವುದರಿಂದ ಹೊಸದಾಗಿ ಎರಡು ಬೋರ್ವೆಲ್ಗಳನ್ನು ಕೊರೆಸುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು.
ಗ್ರಾಮಸ್ಥರ ಅಹವಾಲು ಆಲಿಸಿದ ಸಚಿವ ಕೆ.ಎಸ್. ಬಸವಂತಪ್ಪ ಅವರು, ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R