ವಿಜಯಪುರ: ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದು ಯುಬಿಎಸ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು
ವಿಜಯಪುರ, 18 ನವೆಂಬರ್ (ಹಿ.ಸ.) ಇಂಡಿ ತಾಲೂಕಿನ ತಾಂಬಾ ಗ್ರಾಮದ ಯುಬಿಎಸ್ ಮತ್ತು ಯುಬಿಎಲ್ಪಿಎಸ್ ಚಿಕ್ಕ ಅಗಸಿ ಶಾಲೆಯಲ್ಲಿ ಆಯೋಜಿಸಿದ್ದ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್
ಮಕ್ಕಳಿಗೆ ಪ್ರಶಸ್ತಿ ಪ್ರಧಾನ


ವಿಜಯಪುರ, 18 ನವೆಂಬರ್ (ಹಿ.ಸ.)

ಇಂಡಿ ತಾಲೂಕಿನ ತಾಂಬಾ ಗ್ರಾಮದ ಯುಬಿಎಸ್ ಮತ್ತು ಯುಬಿಎಲ್ಪಿಎಸ್ ಚಿಕ್ಕ ಅಗಸಿ ಶಾಲೆಯಲ್ಲಿ ಆಯೋಜಿಸಿದ್ದ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮಲ್ಲಿರುವ ಕಲೆ, ಸಾಹಿತ್ಯ, ಸಾಂಸ್ಕೃತಿಕ ಆಸಕ್ತಿ ಹಾಗೂ ಸೃಜನಶೀಲತೆಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸುವ ಮೂಲಕ ಶಾಲೆಗೆ ಹೆಮ್ಮೆ ತಂದರು.

ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಕೆ.ಐ. ಮಕಾನದಾರ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರೆ ಮಕ್ಕಳು ಭವಿಷ್ಯದಲ್ಲಿ ಇನ್ನೂ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಆರಂಭದಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಭವಿಷ್ಯದ ಉತ್ತಮ ಸಾಧಕರನ್ನಾಗಿ ರೂಪಿಸಬೇಕು. ಮಕ್ಕಳ ಪ್ರತಿಭೆಗೆ ಸೂಕ್ತ ಅವಕಾಶ ಕಲ್ಪಿಸಿ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರು, ಪಾಲಕರು ಹಾಗೂ ಸಮಾಜದ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್.ಎಸ್. ಅರಬ, ಎನ್.ಬಿ. ಚೌಧರಿ, ಎಸ್.ಪಿ. ಪೂಜಾರಿ, ಅತಿಥಿ ಶಿಕ್ಷಕ ಅಫ್ತಾಬ್ ಮುಲ್ಲಾ ಸೇರಿದಂತೆ ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದು ಮಕ್ಕಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande