
ಬಳ್ಳಾರಿ, 18 ನವೆಂಬರ್ (ಹಿ.ಸ.)
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ ಅವರು ನವೆಂಬರ್ 20 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ನಜೀರಸಾಬ್ ಸಭಾಂಗಣದಲ್ಲಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅವರು ನಡೆಸಲಿದ್ದಾರೆ. ಈ ಸಭೆಯಲ್ಲಿ ಭೋವಿ ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 01.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಬಳಿಕ 03 ಗಂಟೆಗೆ ಸಂಗನಕಲ್ಲು ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಭೋವಿ ಕಾಲೋನಿಗಳ ಪರಿಶೀಲನೆಯನ್ನು ಅವರು ಕೈಗೊಳ್ಳಲಿದ್ದಾರೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್