

ಬಳ್ಳಾರಿ, 19 ನವೆಂಬರ್ (ಹಿ.ಸ.)
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಂದ ಸ್ಥಾಪಿತವಾಗಿರುವ ಭಾರತೀಯ ಬೌದ್ಧ ಮಹಾಸಭಾ ಬಳ್ಳಾರಿ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಪತ್ರಕರ್ತ ಸಿ. ಶಿವರಾಮ ಸಿರಿಗೇರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಫುಲೆ ಅವರು ನೇಮಕವಾಗಿದ್ದಾರೆ.
ನಗರದ ಬಳ್ಳಾರಿ ಜಿಲ್ಲಾ ಡಾ.ಬಿ ಆರ್ ಅಂಬೇಡ್ಕರ್ ಸಂಘದ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮಿತಿ ವಾರ್ಷಿಕ ಸಭೆಯಲ್ಲಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಜಿಲ್ಲಾಧ್ಯಕ್ಷ ಕಮಲರತ್ನ ಭಂತೇಜಿ ಅವರ ಅಧ್ಯಕ್ಷತೆ, ರಾಷ್ಟ್ರೀಯ ಉಪಾಧ್ಯಕ್ಷ, ಕರ್ನಾಟಕ ಉಸ್ತುವಾರಿ ಮಲ್ಲಿಕಾರ್ಜುನ ಭಾಲ್ಕಿ, ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷರಾದ ಮನೋಹರ್ ಮೋರೆ ಅವರ ಸಮ್ಮುಖದಲ್ಲಿ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಅಗಸನೂರು ಹುಸೇನಪ್ಪ, ಬೂದುಗುಪ್ಪ ಸಿ. ಚಿದಾನಂದ, ಎಮ್ಮಿಗನೂರು ಮಾರುತಿ ಮತ್ತು ಮಹಿಳಾ ವಿಭಾಗದ ಸಂಗೀತಾ. ಪಿ, ಖಜಾಂಚಿಯಾಗಿ ಕುರುವಳ್ಳಿ ಶೇಖರ್, ಗಾದಿಲಿಂಗಪ್ಪ ಅವರನ್ನು ನೇಮಿಸಲಾಯಿತು.
ಮಾಜಿ ರಾಜ್ಯಾಧ್ಯಕ್ಷ, ಹಿರಿಯ ಸಾಹಿತಿ ಡಾ. ವೆಂಕಟಯ್ಯ ಅಪ್ಪಗೆರೆ, ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ವಿ. ಎರಕುಲಸ್ವಾಮಿ ಮತ್ತು ಸಮಿತಿಯ ಬಳ್ಳಾರಿ ಜಿಲ್ಲಾ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶಕರಾಗಿ ನೇಮಕ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್