

ಬಳ್ಳಾರಿ, 19 ನವೆಂಬರ್ (ಹಿ.ಸ.)
ಕರ್ನಾಟಕ ರಾಜ್ಯದಲ್ಲಿ ಪದೇ ಪದೇ ಹೆಚ್ಚುತ್ತಿರುವ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ, ಸಾರಿಗೆ, ಪೆಟ್ರೋಲ್, ಇನ್ನಿತರೆಗಳ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.
ನಗರದ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರು ಪ್ರತಿಭಟನೆಯ ನೇತೃತ್ವವಹಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತಗಳ ಕಾರಣ ದಿನೇ ದಿನೇ ಆಹಾರ ಪದಾರ್ಥಗಳ ಬೆಲೆ ಹೆಚ್ಚುತ್ತಿದೆ. ಪೆಟ್ರೋಲ್, ಸಾರಿಗೆ ಮತ್ತು ಹಾಲು ಇನ್ನಿತರೆಗಳ ಬೆಲೆ ಏರಿಕೆ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳು ಜನರನ್ನು ಆರ್ಥಿಕವಾಗಿ ಸೊರಗಿಸುತ್ತಿವೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಮೋಕಾ ಅವರು, ಜನಸಾಮಾನ್ಯರ ಬದುಕಿಗೆ ಹೊರೆಯಾಗುತ್ತಿರುವ ಸರ್ಕಾರದ ನೀತಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಧ್ವನಿ ಎತ್ತಿ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಸರ್ಕಾರ ಜನರನ್ನು ವಂಚಿಸುವುದನ್ನು ಬಿಡಬೇಕು ಎಂದರು.
ಬಳ್ಳಾರಿ ನಗರ ಮಂಡಲದ ಅಧ್ಯಕ್ಷ ವೆಂಕಟರಮಣ, ಪಾಲಿಕೆ ಸದಸ್ಯರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀವಾಸ್ ಮೋತ್ಕಾರ್ ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್