ನವೆಂಬರ್ 21 : ಬಳ್ಳಾರಿ ನಗರ ವಿದ್ಯುತ್ ಗ್ರಾಹಕರ ಸಭೆ
ಬಳ್ಳಾರಿ, 19 ನವೆಂಬರ್ (ಹಿ.ಸ.) ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ನವೆಂಬರ್ 21 ರಂದು ಮಧ್ಯಾಹ್ನ 12 ಗಂಟೆಗೆ ನಗರ ಉಪ-ವಿಭಾಗದ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ. ಜೆಸ್ಕಾಂ ನಗರ ವಿಭಾಗದ
ನವೆಂಬರ್ 21 : ಬಳ್ಳಾರಿ ನಗರ ವಿದ್ಯುತ್ ಗ್ರಾಹಕರ ಸಭೆ


ಬಳ್ಳಾರಿ, 19 ನವೆಂಬರ್ (ಹಿ.ಸ.)

ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ನವೆಂಬರ್ 21 ರಂದು ಮಧ್ಯಾಹ್ನ 12 ಗಂಟೆಗೆ ನಗರ ಉಪ-ವಿಭಾಗದ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ.

ಜೆಸ್ಕಾಂ ನಗರ ವಿಭಾಗದ (ಕಾರ್ಯ ಮತ್ತು ಪಾಲನೆ) ಕಾರ್ಯನಿರ್ವಾಹಕ ಅಭಿಯಂತರರು (ಇಇ) ಅಧ್ಯಕ್ಷತೆ ವಹಿಸುವರು. ಬಳ್ಳಾರಿ ನಗರದ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳಿಗೆ ಸಂಬ0ಧಿಸಿದ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande