ಇಂದಿರಾಗಾಂಧಿ ಜನ್ಮದಿನ: ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ
ಬೆಂಗಳೂರು, 19 ನವೆಂಬರ್ (ಹಿ.ಸ.): ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌ
ಇಂದಿರಾಗಾಂಧಿ ಜನ್ಮದಿನ


ಬೆಂಗಳೂರು, 19 ನವೆಂಬರ್ (ಹಿ.ಸ.):

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಬಳಿಕ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿದಂತೆ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande