ಜಮಖಂಡಿ ನಗರದಲ್ಲಿ ಪೊಲೀಸರಿಂದ ಫುಟ್ ಪೆಟ್ರೋಲಿಂಗ್: ಸುಗಮ ಸಂಚಾರಕ್ಕೆ ಕ್ರಮ
ಬಾಗಲಕೋಟೆ, 19 ನವೆಂಬರ್ (ಹಿ.ಸ.) ಜಮಖಂಡಿ ನಗರದ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಮಖಂಡಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಫುಟ್ ಪೆಟ್ರೋಲಿಂಗ್ ನಡೆಸಲಾಯಿತು ಎಂದು ಸಿಪಿಐ ಎಂ.ಡಿ. ಮಡ್ಡ
ಪೋಲಿಸ್ ಮಾರ್ಚ್


ಬಾಗಲಕೋಟೆ, 19 ನವೆಂಬರ್ (ಹಿ.ಸ.)

ಜಮಖಂಡಿ ನಗರದ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಮಖಂಡಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಫುಟ್ ಪೆಟ್ರೋಲಿಂಗ್ ನಡೆಸಲಾಯಿತು ಎಂದು ಸಿಪಿಐ ಎಂ.ಡಿ. ಮಡ್ಡಿ ತಿಳಿಸಿದ್ದಾರೆ.

ನಗರದ ಪ್ರಮುಖ ರಸ್ತೆ, ವೃತ್ತ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಸಂಚರಿಸಿದ ಅಧಿಕಾರಿಗಳು, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕ ಸಂಚಾರಕ್ಕೆ ಉಂಟಾಗುತ್ತಿದ್ದ ತೊಂದರೆಗಳನ್ನು ಗಮನಿಸಿ, ಅಡ್ಡಿಯಾಗಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದೇ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಸ್ಥರಿಗೆ ರಸ್ತೆ ಒತ್ತುವರಿ ಮಾಡದಂತೆ ಹಾಗೂ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ವಹಿವಾಟು ನಡೆಸುವಂತೆ ತಿಳಿವಳಿಕೆ ನೀಡಲಾಯಿತು. ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೆ ನಿಗದಿತ ಸ್ಥಳಗಳಲ್ಲಿಯೇ ಪಾರ್ಕಿಂಗ್ ಮಾಡಬೇಕು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಯಿತು.

ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದ್ದು, ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂಬ ಭರವಸೆಯನ್ನೂ ನೀಡಲಾಯಿತು.

ಸಾರ್ವಜನಿಕರ ಸಹಕಾರ ಅಗತ್ಯ

ಈ ಕುರಿತು ಸಾರ್ವಜನಿಕರಲ್ಲಿ ಮನವಿ ಮಾಡಿದ ಸಿಪಿಐ ಎಂ.ಡಿ. ಮಡ್ಡಿ ಅವರು, ವಾಹನ ಸವಾರರು ನಿಗದಿತ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು. ರಸ್ತೆ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವಾಹನ ನಿಲುಗಡೆ ಮಾಡಬಾರದು. ಬೀದಿ ಬದಿ ವ್ಯಾಪಾರಸ್ಥರು ರಸ್ತೆ ಒತ್ತುವರಿ ಮಾಡದೆ ವ್ಯಾಪಾರ ನಡೆಸಬೇಕು. ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande