
ಮೈಸೂರು, 19 ನವೆಂಬರ್ (ಹಿ.ಸ.):
ವಯೋಸಹಜ ಕಾರಣಗಳಿಂದಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೀಗ 80 ವರ್ಷ ವಯಸ್ಸಾಗಿದೆ. ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಾರೆ. ಆದರೆ ಹಿಂದಿನಂತೆ ಓಡಾಟ ನಡೆಸುವುದು ಕಷ್ಟವಾಗುತ್ತಿದೆ. ಈ ಕಾರಣದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ತಡವಾಗಿ ಆಗಮಿಸಿದ್ದೆ. ಹೀಗಾಗಿ ಖಾಲಿ ಇದ್ದ ಕುರ್ಚಿಯಲ್ಲಿ ಕುಳಿತಿದ್ದೆ. ಇದರಲ್ಲಿ ನನ್ನನ್ನು ಕಡೆಗಣಿಸಿರುವ ಯಾವುದೇ ವಿಚಾರವಿಲ್ಲ. ಈ ಕುರಿತು ಈಗಾಗಲೇ ಸ್ಪಷ್ಟನೆಯನ್ನೂ ನೀಡಿದ್ದೇನೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.