

ಹೈದರಾಬಾದ್, 02 ನವೆಂಬರ್ (ಹಿ.ಸ.):
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿರುವ ಭಾಗ್ಯಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿಯ ರಾಷ್ಟ್ರವ್ಯಾಪಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಅಭಿಯಾನದ ಅಂಗವಾಗಿ ಆಯೋಜಿಸಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಹೈದರಾಬಾದ್‌ಗೆ ಆಗಮಿಸಿದ್ದರು. ಪಾದಯಾತ್ರೆ ಆರಂಭಿಸುವ ಮುನ್ನ ಭಾಗ್ಯಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತ್ ಶಾ, ಹೈದರಾಬಾದ್‌ನ ಭಾಗ್ಯಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಸೌಭಾಗ್ಯ ದೊರೆತಿದೆ. ನಾಗರಿಕರ ಕಲ್ಯಾಣ ಮತ್ತು ನಿರಂತರ ಸಮೃದ್ಧಿಗಾಗಿ ತಾಯಿ ಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ, ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದ್ರ ರಾವ್, ಸಂಸದ ಎಟೆಲಾ ರಾಜೇಂದರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಸ್ವಾಗತಿಸಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.